Breaking News

ವಿಚಾರಣೆಗೆ ನ್ಯಾಯಾಲಯಕ್ಕೆ ಕರೆತಂದ ಖೈದಿಗಳಿಬ್ಬರು ಪರಾರಿ ಮತ್ತೆ ಬಂಧಿಸಿದ ಪೊಲೀಸರು

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕಾರವಾರ ಜೈಲಿನಿಂದ ಕರೆತಂದ ಇಬ್ಬರು ಸಹೋದರ ಖೈದಿಗಳು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ನಡೆದಿದ್ದು ಮಿಂಚಿನ ವೇಗದಲ್ಲಿ ಬೆನ್ನತ್ತಿದ ಪೊಲೀಸರು ಖೈದಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಜೂ.7 ರ ಬುಧವಾರದಂದು ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಕಾರವಾರದ ಜಿಲ್ಲಾ ಕಾರಾಗೃಹದಿಂದ ಹಾಜರು ಪಡಿಸಲು ಕರೆತಂದ ಖೈದಿಗಳಾದ ಪ್ರಕಾಶ್ ಕೃಷ್ಣಾ ಸಿದ್ದಿ (25 ) ಮತ್ತು ಪಿಲಿಪ್ ಕೃಷ್ಣಾ ಸಿದ್ದಿ( 22) ಎಂಬ ಸಹೋದರರಿಬ್ಬರು ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಹಾಜರಾಗಿ ಮರಳಿ ಕಾರವಾರಕ್ಕೆ ತೆರಳುವ ಮುನ್ನ ಪಟ್ಟಣದ ಸಂಕಲ್ಪ ಕ್ರಾಸ್ ಬಳಿ ಬಸ್ಸಿಗಾಗಿ ಕಾಯುತ್ತಿರುವ ವೇಳೆ ಬೆಂಗಾವಲು ಪೊಲೀಸರನ್ನು ತಳ್ಳಿ, ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಖೈದಿಗಳ ಬೆನ್ನತ್ತಿದ ಪೊಲೀಸರು ಸುಮಾರು 45 ನಿಮಿಷಗಳಲ್ಲಿ ಸಹೋದರ ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲಿಗೆ ಪೊಲೀಸರಿಗೆ ಹೋದ ಜೀವ ಬಂದಂತಾಗಿದೆ.

ಒಂದು ಸಿನಿಮೀಯ ಮಾದರಿಯಲ್ಲಿ ಈ ಘಟನೆ ನಡೆದಿದೆ ಎನ್ನುತ್ತಾರೆ ಹತ್ತಿರದಿಂದ ನೋಡಿದವರು.
ಬಂಧಿತರಾದ ಖೈದಿಗಳಿಬ್ಬರನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದು ಮೆಡಿಕಲ್ ಮಾಡಿಸಿ ನ್ಯಾಯಾದೀಶರ ಮುಂದೆ ಹಾಜರುಪಡಿಸಿ ಮತ್ತೆ ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಹುಟಕಮನೆ ಗುಡ್ಡ ನೆಲಸಮ ಪ್ರಕರಣ ನ್ಯಾಯಾಲಯಲ್ಲಿರುವಂತೆಯೆ ಮಾರಾಟಕ್ಕೆ ತೆರೆಮರೆಯ ಯತ್ನ.!!

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಸದ್ದುಮಾಡಿ ಬೆಂಗಳೂರಿನ ಭೂ ವ್ಯಾಜ್ಯಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ ಹುಟಕಮನೆ ಗುಡ್ಡ ನೆಲಸಮ ಅರಣ್ಯನಾಶ …

Leave a Reply

Your email address will not be published. Required fields are marked *