Breaking News

ಅಕ್ಕಿ ತುಂಬಿದ ಲಾರಿ ಪಲ್ಟಿ ; ರಸ್ತೆಯಲ್ಲಿ ಹರಡಿದ ಅಕ್ಕಿ ಚೀಲಗಳು


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದ ಶಿರ್ಲೆ ಕ್ರಾಸ್ ಬಳಿ ಅಕ್ಕಿ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ರಸ್ತೆ ತುಂಬಾ ಅಕ್ಕಿ ಚೀಲಗಳು ಹರಡಿ ಬಿದ್ದ ಘಟನೆ ನಡೆದಿದೆ.


ತೆಲಂಗಾಣದಿಂದ ಅಕ್ಕಿ ಪ್ಯಾಕೆಟ್‌ಗಳನ್ನು ತುಂಬಿಕೊಂಡು ಮಂಗಳೂರು ಹೊರಟಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಅರಬೈಲು ಘಟ್ಟದ ಶಿರ್ಲೆ ಕ್ರಾಸ್ ಸಮೀಪ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಅಡ್ಡಲಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಹಾಗೂ ಸಹಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿಯುತ್ತಲೇ 108 ಅಂಬುಲೆನ್ಸ್ ತೆರಳಿ ಚಾಲಕ ಮತ್ತು ಸಹಾಯಕನಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೆಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *