Breaking News

ಗರಿಗೆದರುತ್ತಿದೆ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ. ಮತ್ತೆ ಸ್ಥಳ ಪರಿಶೀಲನೆಗೆ ಆಗಮಿಸಿದ ರೈಲ್ವೇ ತಂಡ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಬಹು ದಶಕಗಳ ಉತ್ತರಕನ್ನಡ ಜಿಲ್ಲೆಯ ಅತ್ಯಂತ ಪ್ರಮುಖ ಕನಸುಗಳಲ್ಲಿ ಒಂದಾದ ಹುಬ್ಬಳ್ಳಿ – ಅಂಕೋಲಾ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯಿಂದ ತಾಲೂಕಿನ ವಿವಿಧ ಭಾಗದಲ್ಲಿ ಪರಿಶೀಲಿಸಲು ಮತ್ತೊಮ್ಮೆ ತಜ್ಞರ ತಂಡ ಯಲ್ಲಾಪುರ ತಾಲೂಕಿಗೆ ಆಗಮಿಸಿದ್ದು ಕಮರುತ್ತಿರುವ ಕನಸಿಗೆ ಮತ್ತೆ ಚಿಗುರುವ ಆಸೆ ಮೂಡಿದೆ.


ಭಾರತೀಯ ರೈಲ್ವೆ ವಿಭಾಗದ ಜನರಲ್ ಮ್ಯಾನೇಜರ್ ಕಿಶೋರ್ ಕುಮಾರ್ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲೂಕಿನ ವಿವಿದೆಡೆ ಪರಿಶೀಲನಾ ಕಾರ್ಯ ನಡೆಯುತ್ತಿದ್ದು ಬುಧವಾರ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಡೋಮಗೇರಿ ಕ್ರಾಸ್ ಬಳಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಕಿಶೋರ್ ಕುಮಾರ್ ಅವರ ನೇತೃತ್ವದ ತಂಡವನ್ನು ಗೌರವಿಸಿ ಸನ್ಮಾನಿಸಿದರು.

ರೈಲ್ವೆ ಯೋಜನೆಯ ಅನುಕೂಲಗಳನ್ನು ವಿವರಿಸಿ ಆನೆ ಕಾರಿಡಾರ್ ನಿರ್ಮಾಣದ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.


ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಎಸಿಎಫ್‌ಗಳಾದ ಹಿಮವತಿ ಭಟ್ಟ, ಆನಂದ ಎಚ್.ಎ ಹಾಗೂ ಇಡಗುಂದಿ, ಮಂಚೀಕೇರಿ ವಲಯ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *