Breaking News

ರವಿವಾರದಿಂದ “ಗೃಹಜ್ಯೋತಿ ” ನೊಂದಣಿ ಪ್ರಾರಂಭ ಮೊದಲ ದಿನ ಸರ್ವರ್ ಕೊಂಚ ಸಮಸ್ಯೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಗಳಲ್ಲಿ ಅತ್ಯಂತ ಪ್ರಮುಖವಾದ 200 ಯುನಿಟ್ ವಿದ್ಯುತ್ ಉಚಿತ ನೀಡುವ ಗೃಹ ಶಕ್ತಿ ಯೋನೆಗೆ ನೊಂದಯಿಸಿಕೊಳ್ಳೊ ಪ್ರಕ್ರಿಯೆ ರವಿವಾರದಿಂದ ರಾಜ್ಯಾದ್ಯಂತ ಪ್ರಾರಂಭವಾಗಿದ್ದು ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಇದಕ್ಕಾಗಿ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗಿದೆ.

ಮೊದಲದಿನ ಸರ್ವರ್ ಸಮಸ್ಯೆಯಾಗಿತ್ತು. ಪಟ್ಟಣದಲ್ಲಿನ ಗ್ರಾಮ ಒನ್ ಕೇಂದ್ರದಲ್ಲಿ ನೊಂದಾವಣೆ ಪ್ರಕ್ರಿಯೆ ನಡೆಯಿತು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಂದುವರೆಯುತ್ತಿದ್ದು ಚುನಾವಣ ಪೂರ್ವದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿ ಜಾರಿಗೊಳಿಸಲು ಮುಂದಾಗಿದೆ.

ಅದರಂತೆ ಶಕ್ತಿ ಯೋಜನೆ ರಾಜ್ಯದಲ್ಲಿ ಜಾರಿಯಾಗಿ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ಜಾರಿಯಲ್ಲಿದೆ. ಅದರಂತೆ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಗ್ರಾಹಕರು ಆರ್.ಆರ್.ಸಂಖ್ಯೆ ಆದಾರ್ ಕಾಡ್೯ ನೀಡಿ ನೊಂದಾಯಿಸಿಕೊಳ್ಳಬೇಕಿದೆ. ಹೆಸ್ಕಾಂ ಕಚೇರಿಯಲ್ಲಿ ಅಲ್ಲದೆ ಗ್ರಾಮ ಒನ್ ‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಜನರು ಸದುಪಯೋಗ ಪಡಿಸಿಕೊಳ್ಞಳಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *