Breaking News

ವಿಶ್ವಗುರು ಭಾರತ ಜಗತ್ತಿಗೆ ಕೊಟ್ಟ ಯೋಗ-ಯಲ್ಲಾಪುರದಲ್ಲಿ ವಿವಿಧೆಡೆ ನಡೆದ ವಿಶ್ವ ಯೋಗ ದಿನಾಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ-ಭಾರತ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ದೇಶ ಎಂಬ ಹೆಮ್ಮೆ ನಮ್ಮೆಲ್ಲರಲ್ಲು ಇದೆ ಅದನ್ನು ವಿಶ್ವವೆ ಒಪ್ಪಿಕೊಂಡು ಜೂ,21 ನ್ನು ಅಂತರಾಷ್ಟ್ರೀಯ ಯೋಗ ದಿನವಾಗಿ ಜಗತ್ತು ಆಚರಿಸುತ್ತಿದೆ.


ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಿಶ್ವ ಯೋಗ ದಿನವನ್ನು ನ್ಯಾಯಾದೀಶರು, ವಕೀಲರು, ನ್ಯಾಯಾಲಯ ಸಿಬ್ಬಂದಿಗಳು, ತಾಲೂಕು ಸೇವಾ ಸಮಿತಿ ಸದಸ್ಯರು, ಇನ್ನಿತರರು ಭಾಗವಹಿಸಿ ವಿವಿಧ ಆಸನಗಳನ್ನು ಮಾಡುವುದರೊಂದಿಗೆ ಯೋಗದಿನವನ್ನು ಆಚರಿಸಿದರು.


ಯಲ್ಲಾಪುರ ಖ್ಯಾತ ಶಿಲ್ಪಿ ಯೋಗ ತರಬೇತುದಾರ ಸಂತೋಷ್ ಬಿಕ್ಕು ಗುಡಿಗಾರ ಮಾರ್ಗದರ್ಶನದಲ್ಲಿ ನ್ಯಾಯಾದೀಶರಾದ ಜಿ.ಬಿ ಹಳ್ಳಾಕಾಯಿ ಮತ್ತು ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್ ನೇತೃತ್ವದಲ್ಲಿ ಯೋಗದಿನ ನಡೆಯಿತು. ನಂತರ ಸಂತೋಷ್ ಗುಡಿಗಾರ್ ಅವರಿಗೆ ಗೌರವಿಸಿ ಅಭಿನಂದನೆ ಸಲ್ಲಿಸಿದರು.

ನಮ್ಮ ಪರಂಪರೆಗೆ ಶ್ರೇಷ್ಠ ಯೋಗವನ್ನು ಪತಂಜಲಿ ಮಹರ್ಷಿಗಳು ನೀಡಿದ್ದಾರೆ. ಇಂತಹ ಯೋಗವನ್ನು ವಿಶ್ವಕ್ಕೆ ಮೋದಿಯವರು ಪ್ರಚುರ ಪಡಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿ. 9 ನೇ ವರ್ಷದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಇದು ಭಾರತದ ಹೆಮ್ಮೆಯ ಸಂಗತಿ ಶಾಸಕ ಶಿವರಾಮ ಹೆಬ್ಬಾರ್

ಪಟ್ಟಣದ ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ, ಯುವ ಭಾರತ್, ಪತಂಜಲಿ ಕಿಸಾನ್ ಸೇವಾ ಸಮಿತಿ ಯಲ್ಲಾಪುರ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ನಡೆಯಿತು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಯೋಗ ದಿನದಲ್ಲಿ ಪಾಲ್ಗೊಂಡರು.


ತಾಲೂಕಿನ ಪ್ರತಿಷ್ಟಿತ ಶಿಕ್ಚಣ ಸಂಸ್ಥೆ ವೈಟಿಎಸ್ಎಸ್ ನಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗ ದಿನ ಆಚರಿಸಿದರು.


ವಿಶ್ವ ಯೋಗ ದಿನದ ಶುಭ ಸಂದರ್ಭದಲ್ಲಿ ದೈಹಿಕ ಶಿಕ್ಷಕ ಜಿ.ಎಂ ತಾಂಡುರಾಯನ್ ಮಾರ್ಗದರ್ಶನದಲ್ಲಿ ವಿವಿಧ ಯೋಗ ಆಸನವನ್ನು ಮಾಡಿ ಯೋಗದಿನ ಆಚರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕ ಶಿಕ್ಷಕೇತರರು ಸಿಬ್ಬಂದಿಗಳು ಭಾಗಿಯಾಗಿದ್ದರು.

ಯಲ್ಲಾಪುರದ ಪ್ರಥಮದರ್ಜೆ ಕಾಲೇಜು ಹಾಗು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆದ ” ವಿಶ್ವ ಯೋಗ ದಿನಾಚರಣೆ “
ಯಲ್ಲಾಪುರ ತಾಲೂಕಿನ ಅರಬೈಲ್ ಸ ಹಿ ಪ್ರಾ ಶಾಲೆಯಲ್ಲಿ ಶಿಕ್ಷಕಿ ಶಿವಲೀಲ ಹುಣಸಗಿ ಮಾರ್ಗದರ್ಶನದಲ್ಲಿ ಅಂತರಾಷ್ಟ್ರೀಯ ಯೋಗದಿನಾಚರಣೆ ನಡೆಯಿತು.
ಯಲ್ಲಾಪುರ ತಾಲೂಕಿನ ಇಡಗುಂದಿ “ವಿಶ್ವ ದರ್ಶನ” ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಯೋಗ ದಿನ ಆಚರಿಸಿದರು.
ಯಲ್ಲಾಪುರ ಪಟ್ಟಣದ “ವಿಶ್ವ ದರ್ಶನ” ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಯೋಗ ದಿನ ಆಚರಿಸಿದರು.
ಯಲ್ಲಾಪುರದ “ಹೋಲಿ ರೋಜರಿ ಪ್ರೌಡ ಶಾಲೆಯಲ್ಲಿ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಯೋಗ ದಿನ ಆಚರಿಸಿದರು.
ಯಲ್ಲಾಪುರದ ಸೆಂಟ್ ಮಿಲಾಗ್ರೀಸ್ ಶಾಖೆಯಲ್ಲಿ ಅಂತರರಾಷ್ಟ್ರೀಯ ಯೋಗದಿನವನ್ನುವ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾಮೂಹಿಕವಾಗಿ ಆಚರಿಸಿದರು
ಯಲ್ಲಾಪುರ ತಾಲೂಕಿನ ವಜ್ರಳ್ಳಿ ಸರ್ವೋದಯ ಪ್ರೌಡಶಾಲೆ ಮತ್ತು ಯಲ್ಲಾಪುರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಡಿಯಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಮಕ್ಕಳ ಕವಿಗೋಷ್ಟಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *