Breaking News

ಯಲ್ಲಾಪುರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ NSS ಗೆ ಒಂದು ದಿನದ ತರಬೇತಿ ಕಾರ್ಯಗಾರ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ರಾ.ಸೇ.ಯೋ.ಸ್ಥಳೀಯ ನಿರ್ದೇಶಕರ ಕಚೇರಿ ಬೆಂಗಳೂರು ,ರಾಷ್ಟ್ರೀಯ ಸೇವಾ ಯೋಜನೆ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಹಾಗೂ 2 ಇವುಗಳ ಸಂಯುಕ್ತ ಆಶ್ರಯದಲ್ಲಿ “ಔಪಚಾರಿಕ ಶಿಕ್ಷಣ ಹಾಗೂ ನಿಯಮಿತ ಉದ್ಯೋಗದಲ್ಲಿಲ್ಲದ ಯುವಕರ ಸಮೀಕ್ಷೆ “ಎಂಬ ವಿಷಯ ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು.


ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಿ.ಎಸ್ ಭಟ್ ಉದ್ಘಾಟಿಸಿದರು. ಪ್ರಸ್ತಾವಿಕವಾಗಿ ಮಾತನಾಡಿದ ಎನ್.ಎಸ್.ಎಸ್ ಘಟಕ 1 ರ ಕಾರ್ಯಕ್ರಮಾಧಿಕಾರಿ ರಾಮಕೃಷ್ಣೇಗೌಡ ಈ ಸಮೀಕ್ಷೆ ಬಹಳ ಮಹತ್ವದ್ದು ಇದನ್ನು ವಿದ್ಯಾರ್ಥಿಗಳು ಬಹಳ ಲಕ್ಷ್ಯವಹಿಸಿ ಜವಾಬ್ದಾರಿಯಿಂದ ಮಾಡಬೇಕೆಂದರು.

ನಂತರ ಕಾಲೇಜಿನ ಎನ್.ಎಸ್.ಎಸ್ ಘಟಕ 2 ರ ಕಾರ್ಯಕ್ರಮ ಅಧಿಕಾರಿಗಳಾದ ಡಿ.ಜಿ.ತಾಪಸ್ ಎನ್.ಎಸ್.ಎಸ್‌ಸ್ವಯಂ ಸೇವಕ ಸೇವಕಿಯರಿಗೆ ಸದರಿ ವಿಷಯದ ಸಮೀಕ್ಷೆ ಕುರಿತು ವಿವರವಾಗಿ ತರಬೇತಿ ನೀಡಿದರು.
ಕಾರ್ಯಕ್ರಮವನ್ನು ಎನ್.ಎಸ್.ಎಸ್ ವಿದ್ಯಾರ್ಥಿ ಕುಮಾರ್ ದಿನೇಶ್ ನಿರ್ವಹಿಸಿದನು. ಸ್ನೇಹ ಆಚಾರಿ ಎಲ್ಲರನ್ನು ಸ್ವಾಗತಿಸಿದಳು ಕಾರ್ಯಕ್ರಮದಲ್ಲಿ ಸುಮಾರು ೧೦೦ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *