Breaking News

ನಾಮಧಾರಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ-ಅರ್ಜಿ ಸಲ್ಲಿಸಿ- ರವಿಂದ್ರ ನಾಯ್ಕ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಯಲ್ಲಾಪುರ : ಶ್ರೀ ಗುರು ಸಹಕಾರಿ ಸಂಘ ನಿ., ಯಲ್ಲಾಪುರ ಮತ್ತು ನಾಮಧಾರಿ ವೇದಿಕೆ , ಅನಂತ ನೆನಪು ಹಾಗೂ ಸಮಾಜ ಬಾಂಧವರ ಸಹಕಾರದೊಂದಿಗೆ ಯಲ್ಲಾಪುರದ ನಾಮಧಾರಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.


ಎಸ್.ಎಸ್.ಎಲ್.ಸಿ ಯಲ್ಲಿ ಶೇ.೯೫ಕ್ಕಿಂತ ಹೆಚ್ಚು ಅಂಕ , ಪಿಯುಸಿಯಲ್ಲಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದಿರುವ ಯಾವುದೇ ವಿಭಾಗ, ಯಾವುದೇ ಮಾಧ್ಯಮದಲ್ಲಿ ಉತ್ತೀರ್ಣರಾದವರು ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ತಾಲೂಕಿನ ನಾಮಧಾರಿ ಸಮಾಜದವರಿಗೆ ಮಾತ್ರ ಅರ್ಜಿ ನೀಡಲು ಅವಕಾಶವಿದೆ ಎಂದು ಶ್ರೀ ಗುರು ಸಹಕಾರಿ ಸಂಘ ನಿ., ಅಧ್ಯಕ್ಷ ರವೀಂದ್ರ ಎನ್ ನಾಯ್ಕ ತಿಳಿಸಿದ್ದಾರೆ.
ಪುರಸ್ಕಾರ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಜು.೫ರ ಒಳಗಾಗಿ ದೃಡಪಟ್ಟ ಅಂಕಪಟ್ಟಿ, ಆಧಾರ ಕಾರ್ಡ್, ಸ್ವಯಂ ವಿಳಾಸವಿರುವ ಲಕೋಟೆ ಮತ್ತು ಫೋಟೋ ಸಹಿತ ಅರ್ಜಿಯನ್ನು ಶ್ರೀ ಗುರು ಸಹಕಾರಿ ಸಂಘ ನಿ., ಶಾಂತಾ ಕಾಂಪ್ಲೆಕ್ಸ್, ದೇವಿ ಮೈದಾನ, ಯಲ್ಲಾಪುರ, ಉತ್ತರಕನ್ನಡ ಇವರ ವಿಳಾಸಕ್ಕೆ ತಲುಪಿಸಬೇಕು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *