Breaking News

ಅರಣ್ಯ ಇಲಾಖೆ ನಿವೃತ್ತರ ಸಸ್ಯ ಪ್ರೇಮ ವನಮಹೋತ್ಸವ ಆಚರಣೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಹಸಿರೆ ಉಸಿರು ಕಾಡಿದ್ದರೆ ನಾಡು ಸಕಲ ಚರಾಚರಾವು ಕ್ಷೇಮ ಅದಕ್ಕಾಗಿ ನಮ್ಮ ಮೊದಲ ಆದ್ಯತದ ಅರಣ್ಯ ಉಳಿಸುವುದು ಬೆಳೆಸುವುದು ಆಗಬೇಕಿದೆ. ಅದು ಸಹ ಚಿಕ್ಕ ವಯಸ್ಸಿನಲ್ಲಿ ಪರಿಸರದ ಬಗೆಗಿನ ಕಾಳಜಿ ಹೆಚ್ಚಗಬೇಕಿದೆ. ಅನ್ನ ಆಹಾರವಿಲ್ಲದೆ ಮನುಷ್ಯ ಹೇಗಾದರು ಕೆಲಸಮಯ ಬದುಕಬಲ್ಲ ಆದರೆ ಪ್ರಾಣ ವಾಯು ಆಮ್ಲಜನಕ‌ ನೀಡುವ ಮರಗಿಡಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ನಿವೃತ್ತ ಉಪ ವಲಯ ಅರಣ್ಯಾಧಿಕಾರಿ ನಾಗೇಶ್ ನಾಯ್ಕ್ ಹೇಳಿದರು.


ಅವರು ಪಟ್ಟಣದ ಕಾಳಮ್ಮನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ಹಮ್ಮಿಕೊಂಡ ವನಮಹೋತ್ಸವದಲ್ಲಿ ಸಸಿ ನೆಟ್ಟು ವೇಧಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಅರಣ್ಯ ರಕ್ಷಣೆಯ ಜಾಗೃತಿ ಇನ್ನಷ್ಟು ಹೆಚ್ಚಾಗಬೇಕಿದೆ ಪ್ರತಿಯೊಬ್ಬರ ಪ್ರಾಮಾಣಿಕ ಜವಾಬ್ದಾರಿ ಗಿಡ ನೆಟ್ಟು ಬೆಳೆಸುವುದಾಗಬೇಕಿದೆ ಮತ್ತು ನೆಟ್ಟ ಗಿಡಗಳನ್ನು ಉಳಿಸಿಕೊಳ್ಳುವ ಮಹತ್ಕಾರ್ಯ ಆಗಬೇಕಿದೆ. ಮಕ್ಕಳು ನಿಮ್ಮ ಶಾಲಾ ಆವರಣದಲ್ಲಿನ ಗಿಡಗಳನ್ನು ರಕ್ಷಿಸಿ ಬೆಳೆಸಿ ಪೋಷಿಸಬೇಕಿದೆ ಎಂದು ನಿವೃತ್ತ ವಲಯ ಅರಣ್ಯಾಧಿಕಾರಿ ಸುರೇಶ್ ಬೋರ್ಕರ್ ಹೇಳಿದರು.


ಶಾಲಾ ಮಕ್ಕಳು ಅರಣ್ಯ ಮತ್ತು ಪರಿಸರದ ಕುರಿತು ಗೀತ ಗಾಯನ ಮತ್ತು ಬಾಷಣವನ್ನು ಪ್ರಸ್ತುತ ಪಡಿಸಿದರು.


ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸುರೇಶ ಮಡಿವಾಳ, ಮುಖ್ಯಾಧ್ಯಾಪಕಿ ಸುನಂದ ಪಾಟಣ್ಕರ್, ಪತ್ರಕರ್ತರಾದ ಸುಭ್ರಾಯ ಬಿದ್ರೆಮನೆ , ಕೇಬಲ್‌ ನಾಗೇಶ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು ಶಿಕ್ಷಕಿಯರಾದ ಪುಷ್ಪಾ ಮೊಗೇರ ನಿರೂಪಿಸಿದರು ವಿಜಯ ನಾಯ್ಕ್ ವಂದಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *