Breaking News

ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಘೋಷಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಶಾಸಕ ಹೆಬ್ಬಾರ್ ಮನವಿ ಸಲ್ಲಿಕೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾಗಿ ಕೃಷ್ಣ ಬೈರೇಗೌಡ ಕಂದಾಯ ಸಚಿವರಾದ ನಂತರ ಮೊಟ್ಟಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಮಾರ್ಗ ಮದ್ಯೆ ಯಲ್ಲಾಪುರ ಭೇಟಿ ನೀಡಿ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್ ಅವರ ಗೌರವ ಸ್ವೀಕರಿಸಿ ಕಾರವಾರ ತೆರಳಿದರು.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ‌ ಶಿವರಾಮ ಹೆಬ್ಬಾರ್ ಸಚಿವ ಕೃಷ್ಣ ಬೈರೇಗೌಡ ಅವರನ್ನು ಅರಣ್ಯ ಇಲಾಖೆ ಪ್ರವಾಸಿ ಮಂದಿರದಲ್ಲಿ ಗೌರವದಿಂದ ಬರಮಾಡಿಕೊಂಡು ಹೂ ಗುಚ್ಛ ನೀಡಿ ಸ್ವಾಗತಿಸಿ ಶಾಲು ಹೊದಿಸಿ ಗೌರವಿಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಮೊನ್ನೆದಿನ ಸದನದಲ್ಲಿ ಘಟ್ಟದ ಮೇಲಿನ ತಾಲೂಕುಗಳೆಲ್ಲವನ್ಬು ಬರಪೀಡಿತವೆಂದು ಘೋಷಿಸಬೇಕಿದೆ ಎಂದು ಮನವಿ ಮಾಡಿದ್ದರು.

ಆ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಬಳಿ ಯಲ್ಲಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗದ ಸಂಕಷ್ಟ ಹೇಳ ತೀರದಾಗಿದೆ. ಮಳೆ ನಂಬಿ ಈಗಾಗಲೆ ಬಿತ್ತನೆ ಮಾಡಿದ್ದ ಬೆಳದ ನಾಶವಾಗಿದೆ ಇದರಿಂದ ರೈತರು ಸಾಕಷ್ಟು ನಷ್ಡ ಅನುಭವಿಸುತಾಗಿದೆ ಇದರಿಂದ ಯಲ್ಲಾಪುರ, ಮುಂಡಗೋಡು , ಶಿರಸಿ ತಾಲೂಕಿನ ಪೂರ್ವ ಭಾಗದ ಬನವಾಸಿ ಹೋಬಳಿ ಪ್ರದೇಶಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಸಹಾಯಕ ಆಯುಕ್ತ ದೇವರಾಜ್, ತಾಲೂಕು ಪಂಚಾಯತ ಇ.ಒ.ಜಗದೀಶ್ ಕಮ್ಮಾರ್, ತಹಶಿಲ್ದಾರ ಶ್ರೀಕೃಷ್ಣ ಕಾಮ್ಕರ್, ಪಿ.ಐ.ರಂಗನಾಥ ನೀಲಮ್ಮನವರ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *