Breaking News

ದೇಶಪಾಂಡೆ ಮಾರ್ಗದರ್ಶನ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ನಾಯಕರಿಗಿದೆ ಸಂಬಂಧ ಸೌಹಾರ್ಧವಾಗಿದೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ.

ಪ್ರತಿಧ್ವನಿ,ಯಲ್ಲಾಪುರ: ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೂ ಗಟ್ಟಿಯಾದ ಸಂಬAಧವಿದ್ದು ಎಲ್ಲಿಯೂ ಒಡಕಿಗೆ ಅವಕಾಶವಿಲ್ಲ. ಆ ಕಾರಣದಿಂದಲೇ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲು ಸಾಧ್ಯವಾಗಿದೆ. ಶಾಸಕ ಆರ್.ವಿ.ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ ಕೆಲವರು ಇಲ್ಲಸಲ್ಲದ ವದಂತಿ ಹರಡುತ್ತಿದ್ದಾರೆ ಎಂದು ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ ಹೇಳಿದರು.


ಅವರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕೆಲವು ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯಲ್ಲೂ ಸೋಲುವ ಭೀತಿಯಿಂದ ಪಕ್ಷದಲ್ಲಿ ಒಡಕು ಸೃಷ್ಟಿಸುವ ಹುನ್ನಾರ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಎಂದಿಗೂ ಫಲಿಸದು ಎಂದರು.


ಜಿಲ್ಲೆಯಲ್ಲಿ ಬಹುತೇಕ ನಾಯಕರು ದೇಶಪಾಂಡೆಯವರ ಶಿಷ್ಯರಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯರೂ ಸಹ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಂದ ಉತ್ತಮ ಕೆಲಸ ನಡೆಯುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದಾರೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕವಿದ್ದು ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಜ್ಞಾನೇಶ್ವರ ಗುಡಿಹಾಳ, ಸಿ.ಎಫ್.ನಾಯ್ಕ, ಕೃಷ್ಣ ಪಾಟೀಲ, ಸುಭಾಸ ಕೊರವೇಕರ, ದಿಲೀಪ ರೋಖಡೆ, ಅನಿಲ ನಾಯ್ಕ, ರವಿ ತೋರಣಗಟ್ಟಿ, ಗೋಪಾಲ ಪಾಟೀಲ್, ಎನ್.ಎನ್.ಹೆಬ್ಬಾರ, ನಾಗರಾಜ ಹಂಚಿನಮನಿ, ಸೌದಾಗರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *