Breaking News

ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಕುಸಿತ -ತಕ್ಷಣದಲ್ಲಿ ತೆರವು- ಸಂಚಾರಕ್ಕೆ ಸಮಸ್ಯೆ ಇಲ್ಲಾ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಗುಡ್ಡದ ಮಣ್ಣು ಸಡಿಲವಾಗಿ ಪಕ್ಕದಲ್ಲೆ ಹಾದು ಹೋದ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿದೆ.
ವಿಷಯ ತಿಳಿಯುತ್ತಲೆ ಹೆದ್ದಾರಿ ನಿರ್ವಹಣಾ ಸಿಬ್ಬಂದಿಗಳು ಜೆಸಿಬಿ ಬಳಸಿ ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದರು. ಇದರಿಂದ ಸಂಚಾರಕ್ಕೆ ಯಾವುದೆ ಅಡಚಣೆಯಾಗಿಲ್ಲ.

ಕಳೆದ ಎರಡು ವರ್ಷದ ಹಿಂದೆ ಸುರಿದ ಕುಂಭದ್ರೋಣ ಮಳೆಯಿಂದಾಗಿ ಅರಬೈಲ್ ಘಟ್ಟದಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಅದರಲ್ಲೆ ಒಂದು ಸ್ಥಳದಲ್ಲಿ ಈ ರೀತಿ ಮಣ್ಣು ಸಡಿ¯ವಾಗಿ ಕುಸಿದಿದ್ದು ಸಂಚಾರಕ್ಕೆ ಸಮಸ್ಯೆಯಾಗದಂತೆ ಮಣ್ಣನ್ನು ತೆರವುಗೊಳಿಸಲಾಗಿದ್ದು ಯಾವುದೆ ಅಪಾಯವಿಲ್ಲ ಎಂದು ಹೆದ್ದಾರಿ ನಿರ್ವಹಣೆ ಸಿಬ್ಬಂದಿ ಮುರುಗೇಶ್ ಪತ್ರಿಕೆಗೆ ತಿಳಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *