Breaking News

ಇಡಗುಂದಿ ಸೊಸೈಟಿ ಚುನಾವಣಾ ಪಲಿತಾಂಶ ಪ್ರಕಟ – ನಾರಾಯಣ ಸೀತರಾಮಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ಸೊಸೈಟಿ ಚುನಾವಣೆಗಳಲ್ಲಿ ತೀವ್ರ ಆಸಕ್ತಿ ಕೆರಳಿಸಿದ ಮೂರನೇ ಹಾಗೂ ತಾಲೂಕಿನ ಕೊನೆಯ ಸೊಸೈಟಿಯಾದ ಇಡಗುಂದಿ ಸೊಸೈಟಿ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ ತಂಡ ಜಯಭೇರಿ ಬಾರಿಸಿದೆ.


ನ್ಯಾಯಾಲಯದ ನಿರ್ದೇಶನದಂತೆ ಮತ ಎಣಿಕೆ ಸೋಮವಾರ ನಡೆದಿದ್ದು ಸಾಮಾನ್ಯ ಕ್ಷೇತ್ರದಲ್ಲಿ ನಾರಾಯಣ ಸೀತಾರಾಮ ಭಟ್ಟ ಕೊಡ್ಲಗದ್ದೆ, ವಿಶ್ವನಾಥ ನಾರಾಯಣ ಭಟ್ಟ, ಶಿವರಾಮ ಮಹಾಬಲೇಶ್ವರ ಭಟ್ಟ, ಶಂಕರ ಕೃಷ್ಣ ಭಟ್ಟ ಕಣ್ಣಿ, ಶಂಕರ ಗೋಪಾಲಕೃಷ್ಣ ಭಟ್ಟ, ಅ-ವರ್ಗದಿಂದ ಮಹಾಬಲೇಶ್ವರ ತಮ್ಮಣ್ಣ ಗೌಡ, ಬ-ವರ್ಗದಿಂದ ಸತೀಶ ಶಶಿಕಾಂತ ನಾಯ್ಕ, ಪರಿಶಿಷ್ಟ ಜಾತಿ ವಿಭಾಗದಿಂದ ತಿಮ್ಮಣ್ಣ ಹನುಮಂತಪ್ಪ ಬೋವಿ, ಪರಿಶಿಷ್ಟ ಪಂಗಡದಿಂದ ಶಶಿಧರ ನಾರಾಯಣ ಸಿದ್ದಿ, ಸಾಲಗಾರರಲ್ಲದ ಕ್ಷೇತ್ರದಿಂದ ಗಣಪತಿ ಎನ್ ಭಟ್ಟ ಗೆಲುವು ಸಾಧಿಸಿದ್ದಾರೆ.

ಗೆದ್ದ ಎಲ್ಲ ಸದಸ್ಯರನ್ನು ಮತ್ತು ಗೆಲುವಿಗೆ ಶ್ರಮಿಸಿದ ಎಲ್ಲ ಮುಖಂqರು, ಕಾರ್ಯಕರ್ತರಿಗೆ ಶಾಸಕ ಶಿವರಾಮ ಹೆಬ್ಬಾರ್ ದೂರವಾಣಿ ಮೂಲಕ ಅಭಿನಂದಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *