
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ
ಪ್ರತಿಧ್ವನಿ, ಯಲ್ಲಾಪುರ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಗೌರವ ಕಾರ್ಯದರ್ಶಿಯಾಗಿ ಜಿ.ಎನ್.ಭಟ್ ತಟ್ಟಿಗದ್ದೆ ಅವರನ್ನು ನೇಮಕ ಮಾಡಲಾಗಿದೆ ಎಂದು ಕ.ಸಾ.ಪ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಕಳೆದ ಅನೇಕ ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇವರ ನಾಡ ನುಡಿ ಸೇವೆ ಹಾಗೂ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಪರಿಗಣಿಸಿ ತಾಲೂಕಾ ಕಸಾಪ ಗೌರವ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.


Prathidvani Yellapura