Breaking News

ಸ್ಪೋಕನ್ ಇಂಗ್ಲೀಷ್ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ – ಶ್ರೀರಂಗ ಕಟ್ಟಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಇಂದಿನ ದಿನಗಳಲ್ಲಿ ಪಠ್ಯಕ್ರಮ ಅಷ್ಟೇ ಅಲ್ಲದೇ ವಿವಿಧ ಕೌಶಲಗಳನ್ನು ಕಲಿತುಕೊಳ್ಳುವುದರಿಂದ ಸರ್ಕಾರಿ ಕೆಲಸಗಳ ಮೇಲೆ ಅವಲಂಬಿತರಾಗದೆ ಸ್ವಂತ ಉದ್ಯೋಗ ಮಾಡಬಹುದಾಗಿದೆ ಸ್ಪೋಕಲನ್ ಇಂಗ್ಲೀಷ್ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ವಿಶ್ರ‍್ರಾಂತ ಪ್ರಾಂಶುಪಾಲ ಶ್ರೀರಂಗ ಕಟ್ಟಿ ಹೇಳಿದರು.
ಅವರು ಪಟ್ಟಣದ ಸರ್ಕಾರಿ ಕಾಲೇಜು ಹಾಗೂ ಪಟ್ಟಣದ ಎನ್.ಜಿ.ಒ ಸಂಸ್ಥೆ ಮಾತೃಭೂಮಿ ಸೇವಾ ಪ್ರತಿಷ್ಠಾನದ ಜೊತೆಗೆ ಬ್ಯೂಟಿಷಿಯನ್ ಕೋರ್ಸ್ ಹಾಗೂ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡಲು ಒಡಂಬಡಿಕೆ ಮಾಡಿಕೊಳ್ಳುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ಲೇಸ್‌ಮೆಂಟ್ ಸೆಲ್ ಸಂಚಾಲಕಿ ಸುರೇಖಾ ತಡವಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಆರ್.ಡಿ. ಜನಾರ್ಧನ್ ಸ್ಪೋಕನ್ ಇಂಗ್ಲೀಷ್ ತರಬೇತಿ ಕುರಿತಾಗಿ ಪಿಪಿಟಿ ಮುಖಾಂತರ ಪ್ರಸ್ತುತ ಪಡಿಸಿದರು. ನಂತರ ಮಾತೃಭೂಮಿ ಸೇವಾ ಪ್ರತಿಷ್ಠಾನ ಇದರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ನಿಶಾ ಬ್ಯೂಟಿ ಪಾರ್ಲರ್‌ನ ನಿಶಾ ನಾಯ್ಕ, ಸಂಚಾಲಕ ಡಿ.ಜಿ. ತಾಪಸ್, ಸಾಂಸ್ಕೃತಿಕ ವೇದಿಕೆ ಸಂಚಾಲಕ ಶರತ್ ಕುಮಾರ್, ಪತ್ರಾಂಕಿತ ವ್ಯವಸ್ಥಾಪಕÀ ಎನ್.ಬಿ. ಮೆಣಸುಮನೆ ,ಮಹಿಳಾ ವೇದಿಕೆ ಸಂಚಾಲಕಿ ಸವಿತಾ ನಾಯ್ಕ ಹಾಗೂ ಇತರ ಬೋಧಕ-ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮ್ಯಾನೆಜ್‌ಮೆಂಟ್ ಅಕೌಂಟಿAಗ್ ವಿಷಯದಲ್ಲಿ 1೦೦/1೦೦ ಅಂಕಗಳನ್ನು ಗಳಿಸಿದ ತೃತೀಯ ಬಿ.ಕಾಂ. ನ 2೦ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕು. ವೇದಾ ಭಟ್ಟ ಬಿ.ಕಾಂ ದ್ವಿತಿಯ ಸೆಮಿಸ್ಟರ್ ಪ್ರಾರ್ಥಿಸಿದಳು. ಕು. ವೀಣಾ ಭಟ್ಟ ಬಿ.ಎ 4 ನೇ ಸೆಮಿಸ್ಟರ್ ಎಲ್ಲರನ್ನೂ ಸ್ವಾಗತಿಸಿದಳು. ಕು. ಕೀರ್ತಿ ಮರಾಠಿ ಕಾರ್ಯಕ್ರಮ ನಿರೂಪಿಸಿದಳು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *