Breaking News

ಭೂಕುಸಿತದ ಅಪಾಯದ ಹಿನ್ನೆಲೆ ಕೆಲವು ಫಾಲ್ಸ್ ಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನಲ್ಲಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಅರಣ್ಯ ಇಲಾಖೆಯ ಸೂಚನೆಯಂತೆ ಕೆಲವು ಫಾಲ್ಸ್ ಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಬಹುದಾದ ಹಿನ್ನೆಲೆಯಲ್ಲಿ ಪ್ರವೇಶ ನಿಷೇದಿಸಲಾಗಿದೆ.

ಇಡಗುಂದಿ ವಲಯ ವ್ಯಾಪ್ತಿಯಲ್ಲಿರುವ ಕುಳಿಮಾಗೋಡು ಜಲಪಾತ, ಕಾನೂರು ಜಲಪಾತ, ಹಾಗೂ ಶಿರ್ಲೆ ಜಲಪಾತಗಳ ಮಾರ್ಗಗಳಲ್ಲಿ ಭೂ ಕುಸಿತದ ಭೀತಿ ಇದ್ದು ಆಗಸ್ಟ್ ತಿಂಗಳ ಕೊನೆಯವರೆಗೂ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ಮತ್ತು ಅಲ್ಲಿಗೆ ತೆರಳುವ ಮಾರ್ಗಗಳನ್ನು ಮುಚ್ಚಲಾಗಿದೆ ಎಂದು ಇಡಗುಂದಿ ವಲಯ ಅರಣ್ಯ ಅಧಿಕಾರಿ ಶಿಲ್ಪನಾಯ್ಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರವಾಸಿಗರು ಸಹ ಇಂತಹ ಅಪಾಯ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರಿಕೆ ತೆಗೆದುಕೊಳ್ಳಬೇಕಿದ್ದು ಅರಣ್ಯ ಇಲಾಖೆಯ ಸೂಚನೆಯನ್ನು ನಿರ್ಲಕ್ಷ ತೋರದೆ ಜವಾಬ್ದಾರಿ ನಾಗರಿಕರಾಗಿ ಸೂಚನೆ ಪಾಲಿಸಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *