Breaking News

ಕಾರ್ಯನಿರತ ಪತ್ರಕರ್ತರ ಸಂಘದ ” ಪತ್ರಿಕಾ ದಿನಾಚರಣೆ ” ಸಂಭ್ರಮ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ಯಾವುದೇ ಪತ್ರಿಕೆ ಓದುಗರ ಸ್ವತ್ತೇ ಹೊರತು ಬರೆಯುವವರ ಸ್ವತ್ತಲ್ಲ ಎಂಬುದನ್ನು ವರದಿಗಾರರು ಮನಗಾಣಬೇಕಿದ್ದು, ಪತ್ರಕರ್ತರು ತಮ್ಮ ವೃತ್ತಿಗೆ ನ್ಯಾಯ ಒದಗಿಸುವುದೇ ಇಂತಹ ಕಾರ್ಯಕ್ರಮಗಳ ಸಾರ್ಥಕತೆಗೆ ಸಾಕ್ಷಿಯಾಗುತ್ತದೆ. ಅಲ್ಲದೇ ವರದಿಗಳು ಸಮಾಜದ ದೈನಂದಿನ ಆಗು-ಹೋಗುಗಳಿಗೆ ಸ್ಪಂದಿಸಿ, ಸಮಸ್ಯೆಗಳನ್ನು ನೀಗಿಸುವ ಮಾರ್ಗಸೂಚಿಯಾಗಿರಬೇಕು ಎಂದು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.


ಅವರು ಪಟ್ಟಣದ ಅಡಿಕೆ ಭವನದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘವು ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಇಂದಿನ ಧಾವಂತದ ಕಾಲದಲ್ಲಿ ಮತ್ತೊಬ್ಬರಿಗೆ ಆದರ್ಶವೆನಿಸಬೇಕಾಗಿದ್ದ ವಿವಿಧ ಕ್ಷೇತ್ರಗಳ ವೃತ್ತಿಪರರು ತಮ್ಮ ಗೌರವವನ್ನು ಕಳೆದುಕೊಳ್ಳುತ್ತಿರುವುದು ವಿಷಾದದ ಸಂಗತಿಯಾಗಿದೆ. ವರದಿಗಾರರು ತಮ್ಮ ನಿರ್ಭೀತ ಹಾಗೂ ಮೊನಚಿನ ವರದಿಗಳ ಮೂಲಕ ಸಮಾಜಕ್ಕೆ ಒಳಿತು ಮಾಡುವುದನ್ನು ಬಿಟ್ಟು ಕೇವಲ ವ್ಯಕ್ತಿಗತ ಟೀಕೆಗಳನ್ನು ವರದಿಗಳಲ್ಲಿ ಬಳಸಿಕೊಳ್ಳುತ್ತಿರುವುದು ಒಳ್ಳೆಯದಲ್ಲ ಎಂದರು.


ಅತಿಥಿಗಳಾಗಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಮಾತನಾಡಿ, ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಚಿಕ್ಕ ವರದಿಗಳಿಗೂ ಖಂಡಿತ ಮಹತ್ವವಿದ್ದು, ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ಬ್ರಷ್ಟಾಚಾರ ತುಂಬಿದ್ದರೂ, ಪತ್ರಿಕಾ ಕ್ಷೇತ್ರ ಇಂದಿಗೂ ಪಾವಿತ್ರತೆ ಉಳಿಸಿಕೊಂಡಿದೆ ಎಂದರು.


ಮತ್ತೋರ್ವ ಅತಿಥಿ ತಾ.ಕಾ.ನಿ ಸಂಘದ ಜಿಲ್ಲಾಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಮಾತನಾಡಿ, ಪತ್ರಕರ್ತರು ಪ್ರಾಮಾಣಿಕತೆಯಿಂದ ತಮ್ಮತನ ಉಳಿಸಿಕೊಳ್ಳಬೇಕಿರುವುದು ಅತ್ಯಗತ್ಯವಾಗಿದ್ದು, ಪತ್ರಿಕೆಗಳು ಉಳಿದು ಬೆಳೆಯಲು ಪ್ರತಿಯೊಬ್ಬರ ಸಹಕಾರ ಅವಶ್ಯಕ ಎಂದರು.


ಸನ್ಮಾನ ಸ್ವೀಕರಿಸಿದ ತಾ.ಕಾ.ನಿ ಸಂಘದ ಮಾಜಿ ಅಧ್ಯಕ್ಷ ಡಿ.ಜಿ.ಭಟ್ಟ ಧುಂಡಿ ಮಾತನಾಡಿ, ಇಂದಿನ ಪತ್ರಿಕಾ ಕ್ಷೇತ್ರದಲ್ಲಿ ಕಂಡುಬರುವ ನಂಬಿಕೆ, ದೂರದರ್ಶನ ಮತ್ತು ಮಾಧ್ಯಮ ಕ್ಷೇತ್ರಗಳಿಗಿಲ್ಲ ಎಂದ ಅವರು, ಎಚ್ಚರಿಕೆ ಹಾಗೂ ಜಾಗೃತಿಯಿಂದ ವರದಿ ಮಾಡಿ ಪತ್ರಕರ್ತರು ಓದುಗರ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದರು.


ಇದೇ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಮಕ್ಕಳಾದ ಚೈತ್ರಾ ಮತ್ತು ದೀಕ್ಷಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಡಕೆ ವ್ಯಾಪಾರಿ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಪ್ರಾ.ಶಾ.ಶಿ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ತಾಲೂಕಾ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯ್ಕ ವೇದಿಕೆಯಲ್ಲಿದ್ದರು.

ಪತ್ರಿಕಾ ವಿತರಕ ರಾಮಚಂದ್ರ ಭಟ್ಟ ಚಿನ್ನಾಪುರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ಸಂಘದ ತಾಲೂಕಾ ಘಟಕಾಧ್ಯಕ್ಷ ಕೆ.ಎಸ್.ಭಟ್ಟ, ಸ.ಪ್ರ.ದ ಕಾಲೇಜು ವಿದ್ಯಾರ್ಥಿನಿ ಕಾವ್ಯಶ್ರೀ ಮಾತನಾಡಿದರು. ಸಪ್ರ.ದ ಕಾಲೇಜಿನ ಕಾವ್ಯಾ ಮತ್ತು ಸ್ವಾತಿಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸುಬ್ರಾಯ ಬಿದ್ರೇಮನೆ, ಸ್ವಾಗತಿಸಿದರು. ದತ್ತಾತ್ರೇಯ ಕಣ್ಣೀಪಾಲ್ ನಿರ್ವಹಿಸಿದರು. ವಿಜಯಕುಮಾರ ಮತ್ತು ಜಯರಾಜ ಗೋವಿ ಸನ್ಮಾನ ಪತ್ರ ವಾಚಿಸಿದರು. ಪ್ರಭಾ ಜಯರಾಜ ವಂದಿಸಿದರು.

ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಮ್ಮ ಅಭಿಯಾನ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *