Breaking News

ಕಸ್ತೂರಿ ರಂಗನ್ ವರದಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳ ಮರಣ ಶಾಸನ ಜಾರಿಯಾಗಲು ಬಿಡುವುದಿಲ್ಲ.

ತ್ತರ ಕನ್ನಡ ಜಿಲ್ಲೆಯ ಜನಜೀವನ ಅರಣ್ಯವಾಸಿ ಬುಡಕಟ್ಟು ಜನಾಂಗದವರ ಮೇಲೆ ಗಂಭೀರ ಪರಿಣಾಮ ಬೀರಿ ನನ್ನ ನೆಲಕ್ಕೆ ದಕ್ಕೆಯಾಗಲಿರುವ ಡಾ,ಕೆ.ಕಸ್ತೂರಿ ರಂಗನ್ ವರದಿ ಜಾರಿಗೆ ನನ್ನ ಉಗ್ರ ಹೋರಾಟವಿದೆ – ಹೆಬ್ಬಾರ್


ಪ್ರತಿಧ್ವನಿ,ಯಲ್ಲಾಪುರ : ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಂಡ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ತರಾತುರಿಯಲ್ಲಿ ಡಾ ಕೆ. ಕಸ್ತೂರಿ ರಂಗನ ವರದಿಯನ್ನು ಜಾರಿಗೊಳಸುವ ಬಗ್ಗೆ ತೀರ್ಮಾನಿಸಿರುವುದನ್ನು ನಾನು ಅತ್ಯಂತ ತೀವ್ರವಾಗಿ ವಿರೋದಿಸುತ್ತೇನೆ ಎಂದು ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಮಾದ್ಯಮಕ್ಕೆ ತಮ್ಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಈ ವರದಿ ಜಾರಿಯಿಂದ ಪಶ್ಚಿಮ ಘಟ್ಟಗಳನ್ನು ಒಳಗೊಂಡ 10 ಜಿಲ್ಲೆಗಳ ಅಭಿವೃದ್ಧಿಯ ಹಾಗೂ ಪ್ರವಾಸೊದ್ಯಮದ ಮೇಲೆ ಅಗಾಧ ದುಷ್ಪರಿಣಾಮ ಬೀರಲಿದ್ದು, ಮಲೆನಾಡು ಹಾಗೂ ಕರಾವಳಯಂಚಿನ ನಿವಾಸಿಗಳಲ್ಲಿ ನಡುಕವನ್ನು ಉಂಟುಮಾಡಿದೆ.

ಈ ಹಿಂದಿನ ಕಾಂಗ್ರೇಸ್‌ ಸರ್ಕಾರ ಈ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ಹಾಗೂ ಈ ಹಿಂದಿನ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ಸಂಸದರು ಹಾಗೂ ಶಾಸಕರನ್ನೊಳಗೊಂಡ ನಿಯೋಗವು ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವರವನ್ನು ಭೇಟಿಯಾಗಿ ಈ ವರದಿಯ ಸಾಧಕ ಭಾಧಕಗಳ ಬಗ್ಗೆ ಅರಿವು ಮೂಡಿಸಿದ್ದರು ಹಾಗೂ ಯಥಾಸ್ಥಿತಿಯಲ್ಲಿ ಡಾ. ಕೆ. ಕಸ್ತೂರಿ ರಂಗನ ವರದಿಯನ್ನು ಜಾರಿಗೊಳಸಲು ಸಾಧ್ಯವಿಲ್ಲ ಎಂದು ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು.
ಆದರೆ ಈಗಿನ ಅರಣ್ಯ ಸಚಿವ ಈಶ್ವರ ಖಂಡ್ರೆ ಯವರು ಈ ವರದಿಯ ಕುರಿತು ಸಂಪೂರ್ಣ ಅಧ್ಯಯನ ಮಾಡಿಕೊಳ್ಳಬೇಕು. ಮಲೆನಾಡಿನ ಪ್ರದೇಶದಿಂದ ಬಂದಿರುವ ನಮಗೂ ಸಹ ಅರಣ್ಯ ರಕ್ಷಣೆಯ ಬಗ್ಗೆ ಅತೀವ ಪ್ರೀತಿ ಹಾಗೂ ಕಾಳಜಿ ಇದೆ. ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಬದುಕು ಕಟ್ಟಕೊಂಡಿರುವ ಅನೇಕ ಬುಡಕಟ್ಟು ಜನಾಂಗಗಳ ಸಾಂಸ್ಕೃತಿಕ ಪರಂಪರೆಗಳು ಈ ವರದಿಯಿಂದ ನಶಿಸಿಹೋಗಲಿದೆ.

ಅರಣ್ಯ ಸಚಿವರು ಸಹಸ್ರಾರು ಬಡ ಕುಟುಂಬಗಳ ಜೀವನವನ್ನು ಸರ್ವನಾಶ ಮಾಡುವ ಈ ವರದಿಯನ್ನು ತರಾತುರಿಯಲ್ಲಿ ಜಾರಿಗೊಳಸದೇ ಪಶ್ಚಿಮಘಟ್ಟಗಳನ್ನು ಒಳಗೊಂಡಿರುವ ಪ್ರದೇಶಗಳ ಶಾಸಕರು ಹಾಗೂ ಸಂಸದರೊಂದಿಗೆ ಈ ವರದಿಯ ಸಾಧಕ – ಭಾಧಕಗಳ ಕುರಿತು ವಿಸ್ತ್ರತವಾಗಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳಬೇಕು. ಹೀಗಾಗಿಯೂ ಈ ವರದಿಯನ್ನು ಜಾರಿಗೊಳಸುವುದಾದಲ್ಲಿ ಎಲ್ಲಾ ಹೋರಾಟಕ್ಕೆ ನಾವು ಸಿದ್ಧವಾಗಿದ್ದು, ಶಾಸಕರು ಹಾಗೂ ಸಂಸದರುಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಿದ್ದೇವೆ.

ಉತ್ತರ ಕನ್ನಡ ಜಿಲ್ಲೆಯ ಜನರ ಸಂಕಷ್ಟಕ್ಕೆ ಕಾರಣವಾಗಬಲ್ಲ ಡಾ,ಕೆ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಶಾಸಕ ಹೆಬ್ಬಾರ್ ತೆಗೆದುಕೊಂಡ ದಿಟ್ಟ ನಿರ್ದಾರಕ್ಕೆ ಜಿಲ್ಲೆಯ ಜನತೆ ಬೆಂಬಲಕ್ಕೆ ನಿಲ್ಲಬೇಕಿದೆ ಅದಕ್ಕಾಗಿ ಇದನ್ನು ನಿಮ್ಮ ಡಿಪಿ,ಸ್ಟೇಟಸ್ ಗೆ ಬಳಸಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *