Breaking News

ಅರಣ್ಯ ಸಚಿವ ಈಶ್ವರ ಖಂಡ್ರೆ ಕಸ್ತೂರಿ ರಂಗನ್ ವರದಿ ಕುರಿತ ಹೊಸ ಹೇಳಿಕೆಗೆ ಶಾಸಕ ಹೆಬ್ಬಾರ್ ಸ್ವಾಗತ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ


ಪ್ರತಿಧ್ವನಿ,ಯಲ್ಲಾಪುರ : ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಡಾ.ಕೆ.ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡುವ ಮೂಲಕ ವರದಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಸುಳಿವು ನೀಡಿದ್ದರು.

ಡಾ,ಕಸ್ತೂರಿ ರಂಗನ್ ವರದಿ ಯಥಾವತ್ ಜಾರಿ ವಿರುದ್ದ ನನ್ನ ಹೋರಾಟವಿದೆ.


ಇದಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬಲವಾಗಿ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿ ಪತ್ರಿಕಾ ಹೇಳಿಕೆ ನೀಡಿದ್ದರು.


ಇದನ್ನು ಗಮನಿಸಿದ ಅರಣ್ಯ ಸಚಿವರು ಪರಿಶೀಲನೆ ನಡೆಸದೆ ತರಾತುರಿಯಲ್ಲಿ ಡಾ.ಕೆ.ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದಿಲ್ಲ ಎಂದು ನೀಡಿದ್ದು ಶಾಸಕ ಶಿವರಾಮ ಹೆಬ್ಬಾರ್ ಸಚಿವರ ಯೂಟನ್೯ ಹೇಳಿಕೆಯನ್ನು ಸ್ವಾಗತಿಸಿ ಅಭಿನಂದಿಸಿದ್ದಾರೆ.

ಪಶ್ಚಿಮ ಘಟ್ಟಗಳ ಪ್ರದೇಶಗಳನ್ನು ಒಳಪಡುವ ಶಾಸಕರು ಹಾಗೂ ಸಂಸದರನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಿ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ವಾಸಿಸುವ ಸಹಸ್ರಾರು ಬಡವರ ಜೀವನವನ್ನು ಅಸ್ತಿರಗೊಳಿಸುವ ಡಾ,ಕಸ್ತೂರಿ ರಂಗನ್ ವರದಿಯ ಸಾಧಕ – ಭಾದಕಗಳ ಕುರಿತು ಕೂಲಂಕುಷವಾಗಿ ಚರ್ಚಿಸಿ ಮುಂದಿನ ನಿರ್ಧಾರವನ್ನು ಕೈಗೊಳ್ಳುವಂತೆ ಸರಕಾರಕ್ಕೆ ಆಗ್ರಹಿಸುತ್ತೇ‌ನೆ.
ಅರಬೈಲ್ ಶಿವರಾಮ ಹೆಬ್ಬಾರ್
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *