Breaking News

ಮೊಬೈಲ್ ಕದ್ದದ್ದು 4 ಕ್ಕೆ ದೂರು ದಾಖಲು 5 ಕ್ಕೆ ಬಂಧಿಸಿದ್ದು 6 ಕ್ಕೆ ಯಲ್ಲಾಪುರ ಪೊಲೀಸರ ಚುರುಕು ಕಾರ್ಯಾಚರಣೆ..!!

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ : ದಾರಿಯಲ್ಲಿ ನಡೆದು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಅಪರಿಚಿತನೋರ್ವ ಅಡ್ಡಗಟ್ಟಿ ತಾನು ಪೊಲೀಸ್ ಎಂದು ಹೇಳಿ ವಿದ್ಯಾರ್ಥಿಯ ಕೈಲ್ಲಿದ್ದ 16.500/ರೂ ಮೊಬೈಲ್ ಅನ್ನು ತೆಗೆದುಕೊಂಡು ಹೋದ ಘಟನೆ ಪಟ್ಟಣದ ತಿಲಕ್‌ಚೌಕ್‌ನಲ್ಲಿ ನಡೆದಿದ್ದು ಯಲ್ಲಾಪುರ ಠಾಣೆಯಲ್ಲಿ ದೂರು ಆ.5 ರಂದು ದಾಖಲಾಗಿತ್ತು.
ಈ ಸಂಬಧ ತನಿಖೆಗಿಳಿಗಿದ ಪೊಲೀಸರು ಖಚಿತ ಮಾಹಿತಿಯನ್ನಾಧರಿಸಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ರೆಹಮಾನ್ ಸಾಬ್ ಮಡ್ಲೇರಿ ನಿವಾಸಿ ಅರಫಾತ್ ಅಬ್ದುಲ್ ಅಜೀಂ ಸಾಬ್(29) ಎಂಬಾತನನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಈತನು ಹಾಸನ ಜಿಲ್ಲೆಯ ಜಾವಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಮಾಹಾ ಕಂಪನಿಯ ಎಂ.ಟಿ ಮಾದರಿಯ ಮೋಟಾರ್‌ಸೈಕಲ್ ಅನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದ್ದು ಈತ ಅಂತರ ರಾಜ್ಯ ಕಳ್ಳನಾಗಿರುತ್ತಾನೆ.

ಅಂಕೋಲಾ, ಹುಬ್ಬಳ್ಳಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳ ಠಾಣಾ ವ್ಯಾಪ್ತಿಯಲ್ಲಿ ಈತನ ಮೇಲೆ ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿರುತ್ತದೆ.
ಆರೋಪಿತನಿಂದ ರೆಡ್‌ಮಿ ಕಂಪನಿಯ ನೋಟ್ 11 ಎಸ್ ಮಾದರಿಯ 16,500 ರೂ ಮೌಲ್ಯದ ಮೊಬೈಲ್, ಜಾವಗಲ್‌ನಲ್ಲಿ ಕಳ್ಳತನ ಮಾಡಿ ಕೃತ್ಯಕ್ಕೆ ಬಳಸಿದ 2,2೦,೦೦೦ ಮೌಲ್ಯದ ಮೋಟಾರ್‌ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ.


ಉ.ಕ ಜಿಲ್ಲೆ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ ಜಯಕುಮಾರ್, ಶಿರಸಿಯ ಪೊಲೀಸ್ ಉಪಾಧೀಕ್ಷಕ ಗಣೇಶ್ ಕೆ.ಎಲ್ ಮಾರ್ಗದರ್ಶನದಲ್ಲಿ ಯಲ್ಲಾಪುರ ಪಿ.ಐ ರಂಗನಾಥ ನೀಲಮ್ಮನರ್ ನೇತೃತ್ವದಲ್ಲಿ ಪಿಎಸ್‌ಐಗಳಾದ ರವಿಗುಡ್ಡಿ, ನಿರಂಜನ ಹೆಗಡೆ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ಮಹ್ಮದ್ ಶಫಿ, ಧರ್ಮಾ ನಾಯ್ಕ, ಗಿರೀಶ್ ಲಮಾಣಿ, ಪರಶುರಾಮ ಕಾಳೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಉತ್ತರಕನ್ನಡ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *