

ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ತುಡಗಣಿ ಬ್ರಿಡ್ಜ್ ಸಮೀಪ ಹಾದುಹೋಗಿರುವ ರಾಜ್ಯ ಹೆದ್ದಾರಿ ೯೩ರಲ್ಲಿ ಮೋಟಾರ್ ಸೈಕಲ್ನಲ್ಲಿ ಪಯಣಿಸುತ್ತಿದ್ದ ವ್ಯಕ್ತಿಯೋರ್ವ ಸೇತುವೆಗೆ ಬಡಿದು ಅಪಘಾತವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ

ತಾಲೂಕಿನ ಚಿಪಗೇರಿಯ ಉಚ್ಛೆಗೇರಿ ನಿವಾಸಿ ಶಿರಸಿಯ ಜಿ.ಪಂ ಕಚೇರಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ ದೇವರು ಭಟ್ಟ(೪೦) ಮೃತಪಟ್ಟ ವ್ಯಕ್ತಿ ಯಾಗಿದ್ದಾನೆ. ಆ.೫ರಂದು ಮೃತವ್ಯಕ್ತಿಯು ಶಿರಸಿ ಕಡೆಯಿಂದ ಯಲ್ಲಾಪುರದ ಕಡೆಗೆ ಮೋಟಾರ್ಸೈಕಲ್ ಅನ್ನು ಅತಿವೇಗವಾಗಿ ಚಲಾಯಿಸಿಕೊಂಡು ಬಂದು ನಿಯಂತ್ರಣ ಕಳೆದುಕೊಂಡು ತುಡಗುಣಿ ಸಮೀಪದ ಬ್ರಿಡ್ಜ್ಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿಕೊಂಡವನನ್ನು ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಸುಚಿರಾಯ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ. ಈ ಸಂಬAಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Prathidvani Yellapura