Breaking News

ರಾಷ್ಟ್ರ ಭಕ್ತ ಸಂಘಟನೆಯಿಂದ ಯಲ್ಲಾಪುರದ ಗಾಂಧಿ ಕುಟಿರದಲ್ಲಿ 76 ನೆ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಆಯೋಜನೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ವನಿ,ಯಲ್ಲಾಪುರ – ಆಂಗ್ಲರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತಕ್ಕೆ  76 ರ ಸಂಭ್ರಮ ಅದನ್ನು ಸ್ಮರಣೀಯವಾಗಿಸಲು ಪ್ರತಿವರ್ಷ ವಿಬಿನ್ನ ಕಾರ್ಯಕ್ರಮಗಳೊಂದಿಗೆ  ” ರಾಷ್ಟ್ರ ಭಕ್ತ ಸಂಘಟನೆ ” ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳುತ್ತ ಬಂದಿದೆ ಅದರಂತೆ ಈ ಬರಿಯು ಆಗಸ್ಟ್ 15 ರ ಸಂಜೆ ಯಲ್ಲಾಪುರ ತಾಲೂಕ ಪಂಚಾಯತ ಆವಾರದ ಗಾಂಧಿ ಕುಟಿರದಲ್ಲಿ ಸಾಂಸ್ಕೃತಿಕ, ಯೋದರಿಗೆ ಸನ್ಮಾನ ಮತ್ತು ತಾಲೂಕಿನ ಪ್ರತಿಬಾನ್ವಿತ ಆಯ್ದ ಗಾನಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ರಾಷ್ಟ್ರ ಭಕ್ತ ಬಂದು ಭಗಿನಿಯರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ರಾಷ್ಟ್ರ ಭಕ್ತ ಸಂಘಟನೆಯ ಪ್ರಮುಖ ಶಫಿ ಎಮ್ ಶೇಖ್ ಹೇಳಿದರು.

ಅವರು ಪಟ್ಟದ ಖಾಸಗಿ ಹೊಟೆಲ್ ನಲ್ಲಿ ಕರೆದ ಸುದ್ದಿ ಗೋಷ್ಟಿಯಲ್ಲಿ ಆಹ್ನಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.


     ಈ ಬಾರಿ ವಿಶೇಷವಾಗಿ ನಾಲ್ಕನೆ ಬಾರಿಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ನಾಗರಿಕ ಸನ್ಮಾನ ಏರ್ಪಡಿಸಲಾಗಿದೆ. ಮತ್ತು ಉತ್ತಮ ಅರಣ್ಯ ಅಧಿಕಾರಿಯಾಗಿ ಸೇವೆ ನೀಡುತ್ತಿರುವ ಯಲ್ಲಾಪುರ ಡಿ.ಎಫ್.ಓ ಎಸ್.ಜಿ.ಹೆಗಡೆ ಹಾಗು ಸಾಮಾಜಿಕ ಕ್ಷೇತ್ರದಲ್ಲಿ ಸೇವೆನೀಡುತ್ತಿರುವ ಯುವ ಉದ್ಯಮಿ ಬಾಲಕೃಷ್ಣ ನಾಯಕ್ ಅವರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಸಂಘಟನೆಯ ಮತ್ತೋರ್ವ ಪ್ರಮುಖ ಪ್ರೇಮಾನಂದ ನಾಯ್ಕ್ ಹೇಳಿದರು.
     ಈ ಸಂದರ್ಭದಲ್ಲಿ ಮೀನು ಮಾರುಕಟ್ಟೆ ಕಾರ್ಯದರ್ಶಿ ಬಷೀರ್ ಸೈಯದ್, ಫೀರ್ ಸಾಬ್ ಐ ಶೇಖ್, ಅರವಿಂದ ಕೋಡ್ಕಣಿ ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ತಾಲೂಕು “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ – ಅಧ್ಯಕ್ಷರಾಗಿ ಗುರುಮೂರ್ತಿ ಗಾಂವ್ಕರ್,ಕಾರ್ಯದರ್ಶಿಯಾಗಿ ಗಣೇಶ್ ಪತ್ತಾರ್ ಆಯ್ಕೆ

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರ ತಾಲೂಕಿನಲ್ಲಿ ನೂತನವಾಗಿ “ಫೋಟೋಗ್ರಾಫರ್ ಯೂನಿಯನ್” ಅಸ್ತಿತ್ವಕ್ಕೆ ಬಂದಿರುವುದು ಸ್ಥಳೀಯ ಛಾಯಾಗ್ರಾಹಕರಿಗೆ ಒಗ್ಗಟ್ಟಿನ ವೇದಿಕೆ ನಿರ್ಮಾಣದ …

Leave a Reply

Your email address will not be published. Required fields are marked *