Breaking News

ಮುಂದೂಡಿದ್ದ ಕಂಪ್ಲಿ ಗ್ರಾಮ ಸಭೆ ಯಶಸ್ವಿಯಾಗಿ ನೆರವೇರಿತು

ಪ್ರತಿಧ್ವನಿ,ಯಲ್ಲಾಪುರ : ಅಧಿಕಾರಿಗಳು ಹಾಜರಿರದ ಕಾರಣ ಮುಂದೂಡಲಾಗಿದ್ದ ಕಂಪ್ಲಿ ಗ್ರಾಮಸಭೆಯು ಸೋಮವಾರ ಮದ್ಯಾಹ್ನ 3 ಗಂಟೆಗೆ ಗ್ರಾ.ಪಂ ಆವಾರದಲ್ಲಿ ನಡೆಯಿತು.
ಈ ಹಿಂದೆ ನಿಗಧಿಯಾಗಿದ್ದ ಕಂಪ್ಲಿ ಗ್ರಾಮಸಭೆಗೆ ವಿವಿಧ ಇಲಾಖೆಗಳ ಕೆಲವು ಪ್ರಮುಖ ಅಧಿಕಾರಿಗಳು ಗೈರಾದ ಕಾರಣ ಸಭೆ ಮುಂದೂಡಲಾಗಿ ಜಿಲ್ಲೆಯಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಆ.5 ರಂದು ನಡೆದ ಕೆಡಿಪಿ ಸಭೆಯಲ್ಲೂ ಸಹ ಈ ವಿಷಯ ಮಾರ್ದನಿಸಿತ್ತು. ಈ ಹಿನ್ನಲೆಯಲ್ಲಿ ಆ.7 ರ ಸೋಮವಾರದಂದು ನಿಗಧಿಯಾಗಿದ್ದ ಸಭೆ ಕೊಂಚ ಗಂಭಿರವಾಗಿ ಎಲ್ಲಾ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಿತು.


ಕೆಲವು ವಿಷಯಗಳ ಕುರಿತು ಸುಧೀರ್ಘವಾಗಿ ಚರ್ಚಿಸಿ ಉಪಯುಕ್ತ ಸಲಹೆ ಸೂಚನೆಗಳು ಹೊರಮೂಡಿದವು. ವಿದ್ಯುತ್ ಸಮಸ್ಯೆ, ಹೊಸ ಬಸ್‌ನಿಲ್ದಾಣ ನಿರ್ಮಾಣ, ಸ್ವಚ್ಛತೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಠರಾವು ಹೊರಡಿಸಲಾಗಿ ಗ್ರಾಮಸಭೆ ಅತ್ಯಂತ ಯಶಸ್ವಿಯಾಗಿ ಮುಕ್ತಾಯ ಕಂಡಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *