Breaking News

76 ನೆ ಸ್ವಾತಂತ್ರ್ಯ ಸಂಭ್ರಮಕ್ಕೆ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಗಿಡನೆಟ್ಟು ವನಮಹೋತ್ಸವ ಆಚರಿಸಿದ ಹೆಬ್ಬಾರ್.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ

ಪ್ರತಿಧ್ತನಿ,ಯಲ್ಲಾಪುರ : 76 ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಯಲ್ಲಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವೈ.ಟಿ.ಎಸ್.ಎಸ್ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್, ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವಿಕುಮಾರ ಶಾನಭಾಗ, ಸಹಕಾರ್ಯದರ್ಶಿ ಬಾಲಕೃಷ್ಣ ನಾಯಕ್, ಪ್ರಾಂಶುಪಾಲ ಆನಂದ ಹೆಗಡೆ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ರೇಷ್ಮಾ ಶೇಖೆ ಸಸಿ ನೆಡುವುದರ ಮೂಲಕ ೭೬ನೇ ಸ್ವಾತಂತ್ರೊö್ಯÃತ್ಸವದ ನೆನಪನ್ನು ಹಸಿರಾಗಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ನಾಗರಾಜ ಮದ್ಗುಣಿ, ಪ.ಪಂ ಮಾಜಿ ಅಧ್ಯಕ್ಷ ಶಿರೀಶ್ ಪ್ರಭು, ರಾ.ಸ.ನೌ.ಸಂ ತಾಲೂಕಾಧ್ಯಕ್ಷ ಪ್ರಕಾಶ ನಾಯಕ್, ವಲಯ ಅರಣ್ಯಾಧಿಕಾರಿ ಮಠ, ಡಿ.ಆರ್.ಎಫ್.ಒ ಅಲ್ತಾಫ್ ಶೇಖ, ಉಪನ್ಯಾಸಕರು, ಶಿಕ್ಷಕರು, ಎನ್.ಎಸ್.ಎಸ್ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *