Breaking News

ಶಾಸಕ ಶಿವರಾಮ ಹೆಬ್ಬಾರ್  ಪ್ರಯತ್ನದ ಫಲ ಶೂನ್ಯ ದಾಖಲಾತಿ  ಕಳಚೆ ಪ್ರೌಢಶಾಲೆ ಹುಣಶೆಟ್ಟಿಕೊಪ್ಪ ಗ್ರಾಮಕ್ಕೆ ಸ್ಥಳಾಂತರ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ,ಯಲ್ಲಾಪುರ : ತಾಲೂಕಿನ ಕಳಚೆಯ ಸರಕಾರಿ ಪ್ರೌಢಶಾಲೆಯಲ್ಲಿ ಶೂನ್ಯ ದಾಖಲೆ ಹೊಂದಿದ್ದು ಸರಕಾರ ಈ ಶಾಲೆಯನ್ನು ಮುಚ್ಚುವ ತೀರ್ಮಾನವನ್ನು ಕೈಗೊಂಡಿತ್ತು.ಶಾಸಕರಾದ ಶಿವರಾಮ ಹೆಬ್ಬಾರ್ ಅವರ ವಿಶೇಷ ಪ್ರಯತ್ನ ಫಲವಾಗಿ ಕಳಚೆ ಪ್ರೌಢಶಾಲೆಯನ್ನು ಮದನೂರ ಗ್ರಾಮಪಂಚಾಯತ ವ್ಯಾಪ್ತಿಯ ಹುಣಶೆಟ್ಟಿಕೊಪ್ಪಕ್ಕೆ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಸ್ಥಳಾಂತರಿಸುವಂತೆ ಸರಕಾರ ಆದೇಶ ನೀಡಿದೆ.
ಶೂನ್ಯ ದಾಖಲಾತಿಯನ್ನು ಹೊಂದಿರುವ ಕಳಚೆ ಪ್ರೌಢಶಾಲೆಯನ್ನು ಹುಣಶೆಟ್ಟಿಕೊಪ್ಪ ಗ್ರಾಮಕ್ಕೆ ಸ್ಥಳಾಂತರಿಸುವುದರಿಂದ ಈ ಭಾಗದ ಕರಡೊಳ್ಳಿ,ಕಳಸೂರು, ಹುಲಗೋಡ, ಬಸಳೆಬೈಲ್ ಹಾಗೂ ಖಂಡ್ರಾನಕೊಪ್ಪ ಸೇರಿದಂತೆ ಹಲವಾರು ಭಾಗದ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣವನ್ನು ಪಡೆಯುವುದಕ್ಕೆ ಅನೂಕುಲವಾಗಲಿದೆ ತಮ್ಮೂರಿನಲ್ಲಿಯೆ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸಲಿದೆ.


ಈ ಭಾಗದಲ್ಲಿ ಪ್ರೌಢಶಾಲೆಯನ್ನು ಮಂಜೂರುಗೊಳಿಸುವ ದೂರದೃಷ್ಟಿಯಿಂದ ಶಾಸಕರು ತಾವು ಸಚಿವರಾದ ಅವಧಿಯಲ್ಲಿ ಇಂಡೋ – ಮಿಮ್ ಕಂಪನಿಯ ಸಿ.ಎಸ್.ಆರ್ ಅಡಿಯಲ್ಲಿ 4 ತರಗತಿಯ ಕೊಠಡಿಯನ್ನು ಮಂಜೂರಿಗೊಳಿಸಿದರು. ಕೊಠಡಿಯ ನಿರ್ಮಾಣ ಕಾಮಗಾರಿಯು ಅಂತಿಮ ಹಂತದಲ್ಲಿದ್ದು ಇನ್ನೂ ಕೆಲವು ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.


ಶಾಸಕ ಶಿವರಾಮ ಹೆಬ್ಬಾರ್ ಅವರು ಕಳಚೆ ಪ್ರೌಢಶಾಲೆಯನ್ನು ಹುಣಶೆಟ್ಟಿಕೊಪ್ಪ ಗ್ರಾಮಕ್ಕೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರಿಗೆ ಈ ಭಾಗದ ವಿದ್ಯಾರ್ಥಿಗಳು ಹಾಗೂ ಪಾಲಕರ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *