


ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ,ಯಲ್ಲಾಪುರ : ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸುಲಲಿತವಾಗಿ ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಿಕೊಂಡು ಹಣವನ್ನು ಉಳಿಸಿ ಸಮಯವನ್ನು ಹಾಳುಮಾಡದೆ ವ್ಯಾಜ್ಯದ ಹಿಂದೆ ಬಿದ್ದು ಜೀವನದ ನೆಮ್ಮದಿ ಹಾಳು ಮಾಡಿಕೊಳ್ಳದೆ ರಾಜಿಸಂದಾನದ ಮೂಲಕ ಬಗೆಹರಿಸಿಕೊಳ್ಳಲು ರಾಜ್ಯಾದ್ಯಂತ ದಿನಾಂಕ 9- 9-23 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆಗೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ ಮತ್ತು ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು ದೃಶ್ಯ ಮತ್ತು ಮುದ್ರಣ ಮಾಧ್ಯಮ ಹಾಗು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ವ್ಯಾಪಕ ಪ್ರಚಾರ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಬಿ. ಹಳ್ಳಾಕಾಯಿ ಹೇಳಿದರು.

ಅವರು ಪಟ್ಟಣದ ನ್ಯಾಯಾಲಯದ ಸಭಾಭವನದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಗೊಳಿಸುವ ಕುರಿತು ಕರೆಯಲಾಗಿದ್ದ ವಿವಿಧ ಇಲಾಖೆಗಳ ಸಭೆಯನುದ್ದೇಶಿಸಿ ಹೇಳಿದರು.

ಯಲ್ಲಾಪುರ ನ್ಯಾಯಾಲಯದಲ್ಲಿ ಬಾಕಿ ಇರುವ ಚೆಕ್ ಬೌನ್ಸ್ ಪ್ರಕರಣ, ವೈವಾಹಿಕ ಪ್ರಕರಣ, ಮೊಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಭೂ ವ್ಯಾಜ್ಯ ಪ್ರಕರಣಗಳು ಒಟ್ಟಿನಲ್ಲಿ ಎಲ್ಲಾ ರೀತಿಯ ಸಿವಿಲ್ ಹಾಗು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವ ಸುವರ್ಣಾವಕಾಶವಿದ್ದು ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕಿದೆ ಇದರಿಂದ ಹಣ ಮತ್ತು ಸಮಯದ ಸದ್ಬಳಕೆಯಾಗಲಿದೆ ಎಂದು ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮಿ ಬಾಯಿ ಬಸನಗೌಡ ಪಾಟೀಲ್ ಹೇಳಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಗುರುರಾಜ್ ನ್ಯಾಯವಾದಿಗಳು ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು, ಖಾಸಗಿ ಹಣಕಾಸು ಸಂಸ್ಥೆ ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.
Prathidvani Yellapura