Breaking News

ಕ್ಷೇತ್ರಕ್ಕೆ ಶಾಸಕರಾದರು ಜನಸಾಮಾನ್ಯರ ನಡುವೆ ಸರಳ ಭಕ್ತ ಶಿವರಾಮ ಹೆಬ್ಬಾರ್.

ಪ್ರತಿಧ್ವನಿ,ಯಲ್ಲಾಪುರ : ತಾಲ್ಲೂಕಿನ ಅತ್ಯಂತ ಹಳೆಯ ಹಾಗು ಪ್ರಥಮ ಗಜಾನನೋತ್ಸವ ನಡೆಸುತ್ತಾ ಬಂದಿರುವ ಪ್ರತಿಷ್ಠಿತ ತಿಲಕ್ ಚೌಕ್ ಸಾರ್ವಜನಿಕ ಗಜಾನನೋತ್ಸವ ಆವಾರದಲ್ಲಿ ಮಂಗಳವಾರ ಮಹಾ ಅನ್ನ ಪ್ರಸಾದ ಸೇವೆ ಯಶಸ್ವಿಯಾಗಿ ನೆರವೇರಿತು.

ವರ್ಷಂ ಪ್ರತಿ ನಡೆಸುವ ಚೌತಿ ಗಣಪತಿ ಸಂಭ್ರಮೋತ್ಸವದಲ್ಲಿ ತಿಲಕ್ ಚೌಕ್ ಸಮಿತಿ ಆವಾರದಲ್ಲಿ ವಿಶೇಷ ಅನ್ನ ಸಂತರ್ಪಣೆ ಶ್ರದ್ದಾ ಭಕ್ತಿಯಿಂದ ನೆರವೇರುತ್ತ ಹೆಸರುವಾಸಿಯಾಗಿದೆ ಈ ಬಾರಿಯು ಸಹಸ್ರಾರು ಸಂಖ್ಯೆಯಲ್ಲಿ ತಾಲ್ಲೂಕಿನ ಜನತೆ ಅನ್ನ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.

ಪ್ರತಿ ವರ್ಷದಂತೆ ಈ ಬಾರಿಯು ಶಾಸಕ ಶಿವರಾಮ ಹೆಬ್ಬಾರ್ ತಿಲಕ್ ಚೌಕ್ ಸಾರ್ವಜನಿಕ ಗಜಾನನೋತ್ಸವ ಸಮಿತಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಸರ್ವ ಜನತೆಯ ಒಳಿತಿಗಾಗಿ ಭಗವಂತನಲ್ಲಿ ಪ್ರಾರ್ಥಿಸಿದರು.

ನಂತರ ತಿಲಕ್ ಚೌಕದ ಸಾರ್ವಜನಿಕ ಗಜಾನನೋತ್ಸವ ಸಮಿತಿಯ ವತಿಯಿಂದ ಹಮ್ಮಿಕೊಂಡ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಅನ್ನಪ್ರಸಾದವನ್ನು ಬಡಿಸುವ ಕಾರ್ಯದಲ್ಲಿ ಭಕ್ತಾದಿಗಳೊಂದಿಗೆ ಪಾಲ್ಗೊಂಡರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *