Breaking News

E -ಯಲ್ಲಾಪುರ ಡಿಜಿಟಲ್ ನ್ಯೂಸ್ ಮತ್ತು ಸುಜ್ಞಾನ ಫೌಂಡೇಶನ್ ಶ್ರೀಕೃಷ್ಣ ವೇಷ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ: ಪಟ್ಟಣದ ಅಡಿಕೆ ಭವನದಲ್ಲಿ ಸುಜ್ಞಾನ ಸೇವಾ ಪೌಂಡೇಶನ್ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ ಜಿಲ್ಲಾ ಮಟ್ಟದ ಮುದ್ದುಕೃಷ್ಣ ಪೋಟೊ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದರು.


ಅಡಿಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಆರ್.ವಿ.ಹೆಗಡೆ, ಆನಗೋಡು ಹಾಲು ಒಕ್ಕೂಟದ ಅಧ್ಯಕ್ಷ ಪ್ರಶಾಂತ ಸಭಾಹಿತ, ನಿವೃತ್ತ ತಹಶೀಲ್ದಾರ ಡಿ.ಜಿ.ಹೆಗಡೆ, ಜಿ.ಎಸ್.ಗಾಂವ್ಕರ ಮಾತನಾಡಿದರು.


ನಾಟಿವೈದ್ಯ ನಾರಾಯಣ ಹೆಗಡೆ ಗವೇಗುಳಿ ಹಾಗೂ ಸಾಮಾಜಿಕ ಕಾರ್ಯಕರ್ತ ಶಿವಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು.
ಮಲೆನಾಡು ಸೊಸೈಟಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ನಿವೃತ್ತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ, ಗೌತಮ ಜುವೇರ‍್ಸನ ಪ್ರಕಾಶ ಶೇಟ್, ಶಿಕ್ಷಕ ಸುಧಾಕರ ನಾಯಕ, ಗಣೇಶ ಪತ್ತಾರ್ ಇದ್ದರು.


ಸುಜ್ಞಾನ ಸೇವಾ ಪೌಂಡೇಶನ್ ಅಧ್ಯಕ್ಷ ಜಿ.ಎನ್.ಭಟ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಜ್ಯೋತಿರಾದಿತ್ಯ ಭಟ್ ಸ್ವಾಗತಿಸಿದರು. ಗಾಯತ್ರಿ ಬೋಳಗುಡ್ಡೆ ಪ್ರಾರ್ಥಿಸಿದರು. ಶ್ರೀಧರ ವೈದಿಕರಮನೆ ನಿರ್ವಹಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *