Breaking News

ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಬಳಸೀರಿ ಜೋಕೆ- ಕಠಿಣ ಕಾನೂನು ಕ್ರಮ ಎಚ್ಚರಿಕೆ


ಪ್ರತಿಧ್ವನಿ ಯಲ್ಲಾಪುರ : ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕದಿಂದ ಪಟ್ಟಣದ ರವಿವಾರದ ಸಂತೆಯಲ್ಲಿ ವ್ಯಾಪಾರ ಮಾಡುತ್ತಿರುವ ಎಲ್ಲಾ ಅಂಗಡಿಗಳ ಪರಿಶೀಲನೆ ನಡೆಯಿತು. ಅಪ್ರಾಪ್ತ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಿ ಪೋಷಕರ ಒತ್ತಡದಿಂದ ಹಣದ ಆಮಿಷದಿಂದ ಮತ್ತಾವುದೇ ಅವಸರದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದವರ ತಪಾಸಣೆ ನಡೆಯಿತು.
ವಿದ್ಯೆಯಿಂದ ವಂಚಿತರಾಗಿ ಶಾಲೆ ಬಿಟ್ಟು ಅಂಗಡಿಗಳ ಕೆಲಸದಲ್ಲಿ ತೊಡಗಿಕೊಂಡಿರುವ ಅಪ್ರಾಪ್ತ ವಯಸ್ಸಿನ ಮಕ್ಕಳ ಕುರಿತು ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕದ ಅಧಿಕಾರಿಗಳಾದ ಮಹೇಶ್, ಯಾಲ್ಸಿ ಅವರೊಂದಿಗೆ ತಾಲೂಕು ಅಧಿಕಾರಿ ವೀರವ್ವ , ಶಿಕ್ಷಣ ಇಲಾಖೆಯ ಅಧಿಕಾರಿ ಷಣ್ಮುಖ ಹೆಗಡೆ, ಪೊಲೀಸ್ ಸಿಬ್ಬಂದಿಗಳಾದ ಸಕ್ಕಿ ಪಾಟೀಲ, ಸುರೇಶ್ ಕಂಟ್ರಾö್ಯಕ್ಟರ್ ಪ್ರತಿ ಅಂಗಡಿಗಳಿಗೆ ಭೇಟಿ ನೀಡಿ ಅಂತಹ ಮಕ್ಕಳು ಕಂಡು ಬಂದಲ್ಲಿ ಸಂಬಂಧಿಸಿದ ಅಂಗಡಿ ಮಾಲೀಕರಿಗೆ ಪ್ರಥಮ ಎಚ್ಛರಿಕೆ ನೀಡಿ ಮುಂದೆ ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಂಡಿದ್ದು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಛರಿಸಿದರು.


ಪ್ರತಿ ತಾಲೂಕು ಮಟ್ಟದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿರುವ ಅಪ್ರಾಪ್ತ ಮಕ್ಕಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿತ್ತು. ಆದರೆ ಯಲ್ಲಾಪುರದಲ್ಲಿ ಭಿಕ್ಷಾಟನೆಯಲ್ಲಿ ಯಾರೂ ತೊಡಗಿಕೊಂಡಿರದ ಕಾರಣ ಸಂತೆ ವ್ಯಾಪಾರ ವಹಿವಾಟಿನಲ್ಲಿ ಅಂತಹ ಮಕ್ಕಳೇನಾದರೂ ಕಂಡುಬAದಲ್ಲಿ ಸಂಬAಧಿಸಿದವರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದೇವೆ. ಮುಂದೆ ಅಪ್ರಾಪ್ತ ಮಕ್ಕಳನ್ನು ಕೆಲಸಕ್ಕೆ ಬಳಸುತ್ತಿರುವುದು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಛರಿಕೆ ನೀಡಲಾಗಿದೆ.- ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕದ ಅಧಿಕಾರಿಗಳು

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *