
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್.ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀದೇವಿ ಜಿ ನಾಯ್ಕ ತ್ರಿಬಲ್ ಜಂಪ್ ಪ್ರಥಮ, ಜಾವಲಿನ್ ಪ್ರಥಮ, 1೦೦ ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾಳೆ.

ಸಿರಿಲ್ ಸಿದ್ಧಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದಲ್ಲಿ ಸಂಸ್ಥೆಯನ್ನು ಪ್ರತಿಧಿಸುತ್ತಿರುವ ವಿದ್ಯಾರ್ಥಿಗಳನ್ನು ಹಾಗೂ ಇವರಿಗೆ ತರಬೇತಿನೀಡಿದ ದೈಹಿಕ ಶಿಕ್ಷಕ ಎಂ.ಗಂಗಾನಾಯ್ಕ ರವರನ್ನು ಸಂಸ್ಥೆಯ ಅಧ್ಯಕ್ಷ ರವಿ ಶಾನಭಾಗ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಭಟ್ಟ , ಆಡಳಿತ ಮಂಡಳಿ ಸದಸ್ಯರು , ಪ್ರಾಂಶುಪಾಲ ಆನಂದ ಹೆಗಡೆ , ಮುಖ್ಯಶಿಕ್ಷಕ ಎನ್.ಎಸ್.ಭಟ್ಟ ಹಾಗೂ ಶಿಕ್ಷಕ ವೃಂದ ಮತ್ತು ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.
Prathidvani Yellapura