Breaking News

ಬೀಮಣ್ಣ ನಾಯ್ಕ್ ಮಾತಿಗೆ ಬೇರೆ ಅರ್ಥ ಬೇಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗಟ್ಟಿಯಾಗಿದೆ – ಪ್ರಶಾಂತ್ ಸಭಾಹಿತ್

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ಕಳೆದ ರವಿವಾರ ಅಂಕೋಲಾದಲ್ಲಿ ನಡೆದ ಸಚಿವ ಎಚ್.ಕೆಪಾಟೀಲ ನೇತೃತ್ವದ ಲೋಕಸಭಾ ಚುನಾವಣಾ ಪೂರ್ವಭಾವಿ ಕಾಂಗ್ರೆಸ್ ಸಭೆಯಲ್ಲಿ ಉ.ಕ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ , ಹಾಲಿ ಉ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವ್ಕರ್ ಕುರಿತು ಆಡಿದ ಮಾತುಗಳನ್ನು ಬೇರೆ ಅರ್ಥ ಬರುವಂತೆ ಪತ್ರಿಕೆಗಳಲ್ಲಿ ಸುದ್ದಿಯಾಗಿ ಬಂದಿರುವುದು ವಿಪರ್ಯಾಸವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಪ್ರಶಾಂತ ಸಬಾಹಿತ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸರಸ್ವತಿ ಗುನಗಾ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.


ಉ.ಕ ಜಿಲ್ಲಾ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಸಾಯಿನಾಥ ಗಾಂವ್ಕರ್ ಆಯ್ಕೆಯಾದ ನಂತರ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಾಗುತ್ತಿಲ್ಲ ಎಂಬ ಅರ್ಥ ಬರುವಂತೆ ಮತ್ತು ಭೀಮಣ್ಣ ನಾಯ್ಕ ಸಾಯಿನಾಥ ಗಾಂವ್ಕರ್ ವಿರುದ್ಧ ಮಾತನಾಡಿದ್ದಾರೆ ಎಂಬಂತೆ ಸುದ್ದಿಯಾಗಿದೆ. ಆದರೆ ಅವರಾಡಿದ ಮಾತಿನ ಪ್ರಕಾರ ಪಕ್ಷ ಸಂಘಟನೆ ಕೇವಲ ಜಿಲ್ಲಾಧ್ಯಕ್ಷರ ಹೊಣೆಗಾರಿಕೆ ಮಾತ್ರವಲ್ಲ, ಪ್ರತಿ ತಾಲೂಕಿನ ಬ್ಲಾಕ್ ಅಧ್ಯಕ್ಷರಾದಿಯಾಗಿ ವಿವಿಧ ಘಟಕಗಳ ಪ್ರಮುಖರು , ಬೂತ್‌ಮಟ್ಟದ ಕಾರ್ಯಕರ್ತರಿಂದ ಹಿಡಿದು ಸಂಘಟಿತರಾಗಿ ಶ್ರಮಿಸಿದಲ್ಲಿ ಮಾತ್ರ ಪಕ್ಷ ಸದೃಡವಾಗಲಿದೆ. ನನಗೂ 13 ವರ್ಷಗಳ ಕಾಲ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ ಅನುಭವದ ಆಧಾರದಲ್ಲಿ ಹೇಳುತ್ತಿದ್ದೇನೆ ಎಂದು ಭೀಮಣ್ಣ ನಾಯ್ಕ ತಮ್ಮ ಭಾಷಣದಲ್ಲಿ ಹೇಳಿದ್ದಾರೆಯೇ ಹೊರತು ಅದಕ್ಕೆ ಬೇರೆ ಅರ್ಥ ಇಲ್ಲ.

ಬರಲಿರುವ ಲೋಕಸಭಾ ಚುನಾವಣೆಗೂ ಬೂತ್‌ಮಟ್ಟದಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ಪಕ್ಷ ಸಂಘಟಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಖಚಿತವಾಗಿದೆ. ಜಿಲ್ಲೆಯ ಕಾರ್ಯಕರ್ತರು , ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದೆಂದು ಅವರು ವಿವರಿಸಿದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *