Breaking News

ಆನಗೋಡಿನಲ್ಲಿ ವಿಷಕಾರಿ ಅಣಬೆ ಸೇವನೆ-ಅಸ್ವಸ್ಥಗೊಂಡ ಐವರು- ಪ್ರಾಣಾಪಾಯದಿಂದ ಪಾರು.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಆನಗೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಾಡಿನಲ್ಲಿ ಸಿಗುವ ಅಣಬೆ ತಿಂದು ಐವರು ಅಸ್ವಸ್ಥರಾಗಿ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.


ಈ ವರ್ಷದಲ್ಲಿ ಅಣಬೆ ಸಮಯ ನಿಗಧಿಯಾದಂತಿಲ್ಲ. ನಾಗರಪಂಚಮಿಯಿಂದ ದೊರೆಯುತ್ತಿರುವ ಅಣಬೆ ದೀಪಾವಳಿವರೆಗೂ ಮಾರುಕಟ್ಟೆಯಲ್ಲಿ ಕಂಡುಬರುತ್ತಿದೆ. ಬುಧವಾರ ಆನಗೋಡಿನ ಸಿದ್ದಿ ಸಮುದಾಯದ ಕುಟುಂಬವೊಂದು ಕಾಡಿನಲ್ಲಿ ದೊರೆತ ಅಣಬೆಯನ್ನು ಮನೆಗೆ ತಂದು ಅಡುಗೆ ಮಾಡಿ ಐವರು ಸೇವಿಸಿದ್ದು ಕೆಲ ಸಮಯದ ನಂತರ ತಲೆ ಸುತ್ತಿ ಮೈ ನಡುಗಿ ವಾಂತಿಯಾಗಲು ಪ್ರಾರಂಭಿಸಿದೆ.

ಒಮ್ಮೆಲೆ ಐವರಲ್ಲೂ ಈ ಲಕ್ಷಣಗಳು ಕಂಡೊಡನೆ ಯಲ್ಲಾಪುರ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದ್ದು ನಾಲ್ವರು ಮಹಿಳೆಯರು ಓರ್ವ ಪುರುಷ ಸೇರಿಂದತೆ ಐವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *