Breaking News

ಸಾಮಾಜಿಕ ಹೋರಾಟಗಾರ ಕಿರವತ್ತಿ ವಿಲ್ಸನ್ ಫರ್ನಾಂಡೀಸ್ ಹಲವರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ನಾಯಕತ್ವ ಬೆಳೆಯುವುದು ಜನರೊಂದಿಗೆ ಬೆರೆತು ಕಷ್ಟಸುಖಗಳಲ್ಲಿ ಸ್ಪಂದಿಸಿ ಕೈಲಾದ ಸಹಾಯದೊಂದಿಗೆ ಬಡವರ ಕೆಲಸ ಕಾರ್ಯಗಳನ್ನು ಮಾಡಿಕೊಡುವುದರ ಮೂಲಕವೇ ಹೊರತು ಹಣದಿಂದಲ್ಲ. ಕಾಂಗ್ರೆಸ್ ಪಕ್ಷ ಜಾತಿ, ಧರ್ಮ, ಅಂತಸ್ತನ್ನೂ ಮೀರಿದ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ಜನಪರ ಪಕ್ಷವಾಗಿದೆ. ಇಂತಹ ಪಕ್ಷದೊಂದಿಗೆ ಹೆಜ್ಜೆ ಹಾಕಲು ಮುಂದಾಗಿರುವ ಕಿರವತ್ತಿ ವ್ಯಾಪ್ತಿಯ ಸಮಾಜ ಸೇವಕ ವಿಲ್ಸನ್ ಫರ್ನಾಂಡಿಸ್ ಮತ್ತು ಅವರ ಆಪ್ತ ಬಳಗ ಪಕ್ಷ ಸಏರ್ಪಡೆಯಾಗುತ್ತಿರುವುದು ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಉಸ್ತುವಾರಿ ವಿ.ಎಸ್ ಪಾಟೀಲ ಹೇಳಿದರು.


ಅವರು ಪಟ್ಟಣದ ಕಲ್ಮಠ ಸೀತಾಪುರದಲ್ಲಿ ನೂತನವಾಗಿ ತೆರೆಯಲಾದ ಕಾಂಗ್ರೆಸ್ ಪಕ್ಷದ ಕಚೇರಿ ಉದ್ಘಾಟನೆಯೊಂದಿಗೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ನೂತನ ಕಟ್ಟಡ ಕಾಂಗ್ರೆಸ್ ಕಚೇರಿಗೆ ನೀಡುವಲ್ಲಿ ಸಹಕರಿಸಿದ ಉಲ್ಲಾಸ ಶಾನಭಾಗ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.


ಹಳೆಯ ಯೋಜನೆಗಳಿಗೆ ಹೊಸ ಹೆಸರು ಇಡುತ್ತಲೇ ಸಾಧನೆ ಎಲ್ಲವೂ ನಮ್ಮದೇ ಎಂದು ಬಿಂಬಿಸುತ್ತಾ ಹೊರಟಿರುವ ಭಾರತೀಯ ಜನತಾಪಕ್ಷ ಕಾಂಗ್ರೆಸ್‌ಮುಕ್ತ ಭಾರತದ ಕನಸು ಕಾಣುತ್ತಿದೆ. ಅದು ಎಂದಿಗೂ ನೆರವೇರದು, ಕಾಂಗ್ರೆಸ್ ಬಡವರ ಪಕ್ಷವಾಗಿದೆ, ಬಡವರ ಪರ ನಿಲ್ಲಲಿದೆ ಎಂದು ಕಾಂಗ್ರೆಸ್ ಪಕ್ಷದ ಬದ್ಧತೆಯ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಕೆ ಭಟ್ಟ ಮೆಣಸುಪಾಲ, ಪ್ರಮುಖರಾದ ಉಲ್ಲಾಸ ಶಾನಭಾಗ, ಟಿ.ಸಿ ಗಾಂವ್ಕರ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರಾಘು ಭಟ್ಟ , ಬಾಬಾಜಾನ್ ಶೇಖ, ನೂರ್ ಅಹ್ಮದ್ ಮಾತನಾಡಿದರು.


ಕಿರವತ್ತಿ ಭಾಗದಲ್ಲಿ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಧ್ವನಿ ಎತ್ತಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ವಿಲ್ಸನ್ ಫರ್ನಾಂಡಿಸ್ ಮತ್ತು ಅವರ ಸಹಪಾಠಿಗಳು ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಶಾಲು ಹಾಕಿಸಿಕೊಳ್ಳುವುದರ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ನರ್ಮದಾ ನಾಯ್ಕ, ಕೈಸರ್ ಅಲಿ , ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿ.ಎಸ್ ಭಟ್ಟ, ಉಮ್ಮಚಗಿ ಕಾಂಗ್ರೆಸ್ ಪ್ರಮುಖ ನರಸಿಂಹ ನಾಯ್ಕ, ಮಹಿಳಾ ಘಟಕದ ಅಧ್ಯಕ್ಷೆ ಪೂಜಾ ನೇತ್ರೇಕರ್ ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
ಕಾಂಗ್ರೆಸ್ ಮೀಡಿಯಾ ವಿಭಾಗದ ಅನಿಲ್ ಮರಾಠಿ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿ.ಎಸ್ ಭಟ್ಟ ಪ್ರಾಸ್ತಾವಿಕ ನುಡಿದರು. ವಕ್ತಾರ ರವಿ ನಾಯ್ಕ ಇಂಜಿನಿಯರ್ ವಂದಿಸಿದರು.


ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸ್ಥಿತಿಯಲ್ಲಿದ್ದು ಭವಿಷ್ಯದಲ್ಲಿ ಬರಲಿರುವ ಎಲ್ಲ ಚುನಾವಣೆಗಳನ್ನು ಸಮರ್ಥವಾಗಿ ನಿಭಾಯಿಸಬಲ್ಲದಾಗಿದೆ. ಜಾತಿ, ಮತ,ಪಂಥ ಭೇಧ ಮರೆತ ಕನ್ನಡ ನೆಲದ ನಂಬಿಕಸ್ತ ಪಕ್ಷವಾಗಿದೆ. ಬರುವ ದಿನಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ಜಯ ಹಮ್ಮಿಕೊಂಡು ಇನ್ನಷ್ಟು ಬಲಪಡಿಸುವ ಕಾರ್ಯಕ್ಕೆ ಕಟಿಬದ್ಧನಾಗಿದ್ದೇನೆ. ಪಕ್ಷ ನೀಡುವ ಜವಾಬ್ದಾರಿಯನ್ನು ನಿಷ್ಠಾವಂತನಾಗಿ ನಿಭಾಯಿಸಲಿದ್ದೇನೆ.- ವಿಲ್ಸನ್ ಫರ್ನಾಂಡಿಸ್, ಸಾಮಾಜಿಕ ಕಾರ್ಯಕರ್ತ, ಕಿರವತ್ತಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *