Breaking News

ಬಹುಮುಖ ಪ್ರತಿಭೆಯ ವೈಟಿಎಸ್ಎಸ್ ಶಿಕ್ಷಕ ವಿನೋದ್ ಭಟ್ ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ಡಿ.12 ರಂದು ಶಿರಸಿಯಲ್ಲಿ ನಡೆದ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಪಟ್ಟಣದ ವೈ.ಟಿ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಂಗ್ಲಭಾಷಾ ಶಿಕ್ಷಕ ವಿನೋದ ಭಟ್ಟ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವಿನೋದ್ ಭಟ್ ಉತ್ತಮ ವಾಗ್ಮಿಯಾಗಿದ್ದು ಹಲವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಳುಗರ ಆಪ್ತರೆನಿಸಿದ್ದಾರೆ. ಹಲವು ಪ್ರತಿಷ್ಟಿತ ವೇದಿಕೆ ಕಾರ್ಯಕ್ರಮಗಳಲ್ಲಿ ಉತ್ತಮ ನಿರೂಪಣೆಯೊಂದಿಗೆ ಗಮನಸೆಳೆದಿದ್ದಾರೆ. ಇಂತಹ ಬಹುಮುಖ ಪ್ರತಿಭೆಯ ಶಿಕ್ಷಕ ವಿನೋದ್ ಭಟ್ ಅವರು ಆಶುಭಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರ ಪಟ್ಟಣ ಸಮೀಪದ ಅರಣ್ಯದಲ್ಲಿ ಶ್ರೀಗಂಧ ಚೋರರ ಕರಾಮತ್ತು ಗಂಧದ ಮರ ಕಡಿದ ಕಳ್ಳರು.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಸಮೀಪದಲ್ಲಿರುವ ನಾರಾಯಣಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಕಳ್ಳರು ತಮ್ಮ ಕೈಚಳಕ ತೋರಿದ್ದು ಗುಣಮಟ್ಟದ ಮತ್ತು …

Leave a Reply

Your email address will not be published. Required fields are marked *