
ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ
ಪ್ರತಿಧ್ವನಿ ಯಲ್ಲಾಪುರ – ಕಾರವಾರದ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡದ ಉದ್ಘಾಟನೆ ನೆರವೇರಿತು.
ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ನಂತರ ನಿರಾಳರಾಗದೆ ಸದಾ ಕ್ರಿಯಾಶೀಲರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡು ಇತರರಿಗೆ ಮಾದರಿಯಾಗಿರುವ ಸುರೇಶ್ ಬೋರ್ಕರ್ ಅವರು ಯಲ್ಲಾಪುರ ತಾಲೂಕು ನಿ.ನೌ.ಸಂ ಕಾರ್ಯದರ್ಶಿಯಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಜಿಲ್ಲಾ ಕೇಂದ್ರ ಕಾರವಾರದಲ್ಲಿ ನೂತನವಾಗಿ ನಿರ್ಮಾಣವಾದ ಸಂಘದ ಕಟ್ಟಡದ ಉದ್ಘಾಟನ ಸಮಾರಂಭದಲ್ಲಿ ಸುರೇಶ್ ಬೋರ್ಕರ್ ಸೇರಿದಂತೆ ಯಲ್ಲಾಪುರ ತಾಲೂಕು ಅಧ್ಯಕ್ಷ ಶ್ರೀರಂಗ ಕಟ್ಟಿ ಹಾಗು 80 ವರ್ಷದ ಹಿರಿಯ ನಿವೃತ್ತರಾದ ದಾಮೋದರ ಆಚಾರಿ, ಪಾಂಡು ಗಣೇಶ್ ಮರಾಠಿ ಮತ್ತು ಮೋಹನ್ ಜಿ ನಾಯ್ಕ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
Prathidvani Yellapura