Breaking News

ಪತ್ರಕರ್ತ ಪುತ್ರನ ಸಾಧನೆ – ಪಿಹೆಚ್‌ಡಿ ಪದವಿ ಮುಡಿಗೇರಿಸಿಕೊಂಡ ತಿಲಕ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಹಿರಿಯ ಪತ್ರಕರ್ತರು ಸಮಾಜಮುಖಿ ಚಿಂತಕರು ಶಂಕರ ಭಟ್ಟ ತಾರೀಮಕ್ಕಿ ಅವರ ಪುತ್ರ ಟಿ.ಎಸ್ ತಿಲಕರಾಜ್ ಅವರು ಭೌತಶಾಸ್ತ್ರದಲ್ಲಿ ಎಂ.ಎಸ್.ಸಿ. ಪದವಿ ಪಡೆದು ‘ಸ್ಪೆಕ್ಟೊಸ್ಕೋಪಿಕ್ ಸ್ಟಡಿ ಆಫ್ ಸಮ್ ಫ್ಲೊರೆಸೆಂಟ್ ನ್ಯಾನೊಮಟಿರಿಯಲ್ಸ್ ಆ್ಯಂಡ್ ಆರ್ಗಾನಿಕ್ ಮೊಲೆಕ್ಯುಲ್ಸ್’ ಎಂಬ ವಿಷಯದ ಕುರಿತ ಮಹಾ ಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿ ಘೋಷಿಸಿದೆ.


ಕರ್ನಾಟಕ ವಿ.ವಿ.ಯ ಭೌತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಸಂಜೀವ ಇನಾಮದಾರ್ ತಿಲಕರಾಜ ಅವರಿಗೆ ಮಾರ್ಗದರ್ಶನ ನೀಡಿದ್ದರು.


ಕನ್ನಡಪ್ರಭ ಪತ್ರಿಕೆಯ ತಾಲೂಕಾ ವರದಿಗಾರ ಶಂಕರ ಭಟ್ಟ ತಾರೀಮಕ್ಕಿ ಮತ್ತು ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ ಅವರ ಪುತ್ರನಾಗಿರುವ ತಿಲಕರಾಜ್‌ಗೆ ವಿ.ವಿ.ಯ ಘಟಿಕೋತ್ಸವದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದೆಂದು ವಿ.ವಿ. ಆದೇಶಪತ್ರದಲ್ಲಿ ತಿಳಿಸಿದೆ.
ತಿಲಕರಾಜ್ ಪ್ರಸ್ತುತ ಬೆಂಗಳೂರಿನಲ್ಲಿರುವ ರಾಜ್ಯ ವಿಧಿ ವಿಜ್ಞಾನ ಇಲಾಖೆಯಲ್ಲಿ ವೈಜ್ಞಾನಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *