Breaking News

ಶ್ರೀರಾಮನ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದ ಉಳಿಕೆ ಹಣ ಧಾರ್ಮಿಕ ಕಾರ್ಯಕ್ಕೆ ನೀಡಿಕೆ- ಬಸವೇಶ್ವರ ವೃತ್ತ ರಾಮ ಭಕ್ತ ಬಳಗದ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟೆ ಮತ್ತು ಮಂದಿರ ಲೋಕಾರ್ಪಣೆ ಕಾರ್ಯಕ್ಕೆ ಯಲ್ಲಾಪುರ ತಾಲೂಕಿನಾದ್ಯಂತ ಪೂಜಾ ಪುರಸ್ಕಾರಗಳು ವಿಜ್ರಂಭಣೆಯಿಂದ ಜರುಗಿದ್ದವು ಅದರಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ದಯಾಕಾರಂತ್ ಅವರ ನೇತೃತ್ವದಲ್ಲಿ ಅತ್ಯಂತ ವಿಜ್ರಂಭಣೆಯಿಂದ ಶ್ರೀರಾಮೋತ್ಸವ ಆಚರಿಸಲಾಗಿತ್ತು.


      ಆಚರಣೆಯ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಂಗಡಿಕಾರರು,ಸಾರ್ವಜನಿಕರು,ಸ್ಥಳೀಯ ನಿವಾಸಿಗಳು ಹಾಗು ಹಿತೈಷಿಗಳು ನೀಡಿದ ದೇಣಿಗೆ ಹಣ ಉಳಿಕೆಯಾಗಿದ್ದು 21 ಸಾವಿರ ನಗದು ಕಾಣಿಕೆ ಗ್ರಾಮದೇವಿ ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಲಾಯಿತು.


     

ಮಂಜುನಾಥ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗರ್ಭ ಗುಡಿಗೆ ಟೈಲ್ಸ್ ಜೋಡಣೆಗಾಗಿ ದಯಾಕಾರಂತ್ ನೇತೃತ್ವದಲ್ಲಿ ಸಂಘಟನೆಯ ಇತರರು ಸೇರಿ 21 ಸಾವಿರ ನಗದು ಕಾಣಿಕೆ ದೇಣಿಗೆ ರೂಪದಲ್ಲಿ ನೀಡಲಾಯಿತು. ಧಾರ್ಮಿಕ ಕಾರ್ಯಕ್ಕಾಗಿ ಸಾರ್ವಜನಿಕರು ನೀಡಿದ ದೇಣಿಗೆ ಹಣ ವೃಥಾ ಎಲ್ಲಿಯು ಪೋಲಾಗದೆ ದೈವ ಕಾರ್ಯಕ್ಕೆ ನೀಡಿದ್ದು ಸಾರ್ಥಕತೆ ತೋರಿದ್ದಾರೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *