Breaking News

ಸಂವಿಧಾನ ಜಾಗೃತಿ ಜಾಥಕ್ಕೆ ಯಲ್ಲಾಪುರದಲ್ಲಿ ಶ್ರದ್ದೆಯ ಸ್ವಾಗತ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ : ಸಂವಿಧಾನ ಜಾಗೃತಿ ಜಾಥಾವು ಫೆ.5 ರಂದು ತಾಲೂಕಿಗೆ ಆಗಮಿಸಿದ್ದು ಫೆ.6 ರಂದು ಬಿಸಗೋಡು ಕ್ರಾಸ್‌ನಿಂದ ಭವ್ಯ ಸ್ವಾಗತದೊಂದಿಗೆ ಬೈಕ್ ರ‍್ಯಾಲಿ ಮೂಲಕ ಪಟ್ಟಣದ ಬಸ್‌ನಿಲ್ದಾಣದವರೆಗೆ ಕರೆತರಲಾಯಿತು.


ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಜಗನ್ನಾಥ ರೇವಣಕರ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜನಾರ್ಧನ ಪಾಟಣಕರ, ಕಾರ್ಯದರ್ಶಿ ಸಂತೋಷ ಪಾಟಣಕರ, ಸದಸ್ಯರಾದ ಲೋಕೇಶ ಪಾಟಣಕರ, ನಿರಂಜನ ಪಾಟಣಕರ, ಅನಿಲ್ ಮರಾಠೆ, ರವೀಂದ್ರ ಪಾಟಣಕರ, ಇತರೆ ಸಂಘಟನೆಗಳ ಪದಾಧಿಕಾರಿಗಳಾದ ಮಾರುತಿ ಭೋವಿವಡ್ಡರ, ಅಶೋಕ ಕೊರವರ, ಸಂತೋಷ ಭೋವಿವಡ್ಡರ ಹಾಗೂ ಇನ್ನಿತರ ಪ್ರಮುಖರು, ಪಟ್ಟಣ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು. ಎಲ್‌ಇಡಿ ಪರದೆಯ ಮೂಲಕ ಸಂವಿಧಾನ ಜಾಗೃತಿ ಮಾಹಿತಿಯನ್ನು ಜನತೆಗೆ ಪ್ರದರ್ಶಿಸಲಾಯಿತು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *