Breaking News

ಯಲ್ಲಾಪುರದಲ್ಲೊಂದು ಮನಃ ಕಲಕುವ ಘಟನೆ – ತಂದೆ ಮಗನ ದಾರುಣ ಸಾವು

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನ ಅಪ್ಪೆಕೊಡಿ ಗ್ರಾಮದಲ್ಲಿ ಹಾದುಹೋದ ಬೇಡ್ತಿ ನದಿಯ ನಿಂತ ನೀರಲ್ಲಿ ಮೀನು ಹಿಡಿಯಲು ಹೋದ ತಂದೆ-ಮಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.


ತಾಲೂಕಿನ ಕಂಪ್ಲಿ ಹಳ್ಳಿಗದ್ದೆಯ ಕಲಂದರ ಪಕ್ರು ಸಾಬ(೫೧) ಹಾಗೂ ಅಬ್ದುಲ್‌ಖಾದರ್ ಕಲಂದರ ಸಾಬ(೨೧) ಎಂಬುವರೇ ಮೃತ ವ್ಯಕ್ತಿಗಳಾಗಿದ್ದು ಫೆ.೮ರ ಸಾಯಂಕಾಲ ತಾಲೂಕಿನ ಅಪ್ಪೆಕೊಡಿ ಗ್ರಾಮದಲ್ಲಿ ಹಾದುಹೋದ ಬೇಡ್ತಿ ನದಿಯ ನಿಂತ ನೀರಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ನೀರಲ್ಲಿ ಬಿದ್ದು ಇಬ್ಬರೂ ಮೃತರಾಗಿದ್ದಾರೆ.


ನೀರಿನಲ್ಲಿ ಬಿದ್ದವರನ್ನು ಕಂಪ್ಲಿಯ ಹಸನಸಾಬ ಮುಜಾವರ, ನಿಸ್ಸಾರ ಜಂಡೆವಾಲೆ, ಮಂಚೀಕೇರಿಯ ಖಲೀಲ ಎಂಬುವರು ನೀರಿನಿಂದ ಮೇಲಕ್ಕೆ ತೆಗೆದು ನದಿಯ ದಡದಲ್ಲಿ ಮಲಗಿಸಿದ್ದು ಇವರ ಮರಣದಲ್ಲಿ ಯಾವುದೇ ಸಂಶಯವಿರುವುದಿಲ್ಲ ಎಂದು ಮೃತರ ಪತ್ನಿ ಮಮ್ತಾಜಬೀ ಕಲಂದರ ಸಾಬ ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿರುತ್ತಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *