Breaking News

ಹನುಮ ಧ್ವಜ ಹಾಗೂ ಸಾವರ್ಕರ್ ನಾಮಫಲಕ ತೆರವು ಪ್ರಕರಣ : ಹರಿಪ್ರಕಾಶ್ ಕೋಣೆಮನೆ ಆಕ್ರೋಶ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ –  ಭಟ್ಕಳದ ತೆಂಗಿನಗುಂಡಿ ಬೀಚ್ ಬಳಿಯ ಹನುಮ ಧ್ವಜ ಹಾಗೂ ಸಾವರ್ಕರ್ ನಾಮಫಲಕ ತೆರವು ಮಾಡಿರುವುದನ್ನು ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ ಅವರು ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,‌‌ ‘ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿದ ವೀರ ಸಾವರ್ಕರ್ ಹೆಸರಿನಲ್ಲಿ ಒಂದು ಕಟ್ಟೆ ಕಟ್ಟಿದರೂ ವಿರೋಧ, ನಮ್ಮ ನೆಲದಲ್ಲಿ ನಾವು ಪೂಜಿಸುವ ಈ ನೆಲದ ಆರಾಧ್ಯ ದೇವರುಗಳ ಧ್ವಜ ಹಾರಿಸಿದರೂ ವಿರೋಧ ಮಾಡುತ್ತ ಪ್ರಕರಣ ದಾಖಲಿಸುವ ಮಾನಸಿಕತೆಯ ವಿರುದ್ಧ ಹಿಂದೂಗಳು ಧ್ವನಿ ಎತ್ತಬೇಕಾಗಿದೆ. ‘ಧಾರ್ಮಿಕ ಭಾವನೆಗೆ ಧಕ್ಕೆ, ಗಲಭೆಗೆ ಪ್ರಚೋದನೆ’ ಎನ್ನುವ ಕಾರ‌ಣ ನೀಡಿ ಬಿಜೆಪಿ ಸಂಸದರೂ ಸೇರಿದಂತೆ 20 ಕ್ಕೂ ಹೆಚ್ಚು ಪ್ರಮುಖರು, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು ಹನುಮ ಧ್ವಜದಿಂದ ಗಲಭೆಗೆ ಪ್ರಚೋದನೆ ಆಗುವುದಾದರೂ ಹೇಗೆ? ಅಥವಾ ಧ್ವಜ ನೋಡಿ ಪ್ರಚೋದನೆಗೆ ಒಳಗಾಗಿ ಗಲಭೆ ಎಬ್ಬಿಸುವವರಾರು?‌ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು’ ಎಂದಿದ್ದಾರೆ.
ಧಾರ್ಮಿಕ ಭಾವನೆಗೆ ಧಕ್ಕೆ’ ಎನ್ನುವುದನ್ನು ಒಂದೇ ಧರ್ಮಕ್ಕೆ ಸೀಮಿತವಾಗಿ ಬಳಸುವ ಸರ್ಕಾರ ಮತ್ತು ಅಧಿಕಾರಿಗಳು ‘ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಪಡಿಸಿದ್ದಾರೆ’ ಎಂದು ಯಾರನ್ನಾದರೂ ಬಂಧಿಸಿದ್ದು ಇದೆಯೇ? ಹಾಗಿಲ್ಲದಿರುವಾಗ ಹನುಮ ಧ್ವಜ ಹಾರಿಸಿದ್ದಕ್ಕಾಗಿ ಪ್ರಕರಣ ದಾಖಲಿಸುವ ಈ ಬೆಳವಣಿಗೆ ಖಂಡನೀಯ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಡುವುದಾದರೆ ಕೂಡಲೇ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರ ಮೇಲಿನ ಈ ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಹಾಗೂ ತೆರವುಗೊಳಿಸಿರುವ ಸಾವರ್ಕರ್ ಕಟ್ಟೆ, ಹನುಮ ಧ್ವಜವನ್ನು ಪುನಃ ಸ್ಥಾಪಿಸಲು ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *