Breaking News

ಯಲ್ಲಾಪುರ ತಾಲೂಕಿನ ಕಿರವತ್ತಿ-ಮದನೂರು ಪಂಚಾಯತ ವ್ಯಾಪ್ತಿಯಲ್ಲಿ ಹೆಬ್ಬಾರ್ ಅಭಿವೃದ್ಧಿ ನಡಿಗೆ..

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ –  ತಾಲೂಕಿನ ಕಿರವತ್ತಿ ಮತ್ತು ಮದನೂರು ಪಂಚಾಯತ ವ್ಯಾಪ್ತಿಯಲ್ಲಿ ಕೆಲವಾರು ಅಭಿವೃದ್ಧಿ ಪರ ಕಾರ್ಯಕ್ರಮದಲ್ಲಿ ಶಾಸಕ ಹೆಬ್ಬಾರ್ ಪಾಲ್ಗೊಂಡರು.


    ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ 140 ಕ್ಕು ಹೆಚ್ಚು ಅಂಗವಿಕಲ ಮತ್ತು ವಿಧವ ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದರು.


     ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೋಟಿ ಹಣ ಸರ್ಕಾರದಿಂದ ಬಿಡುಗಡೆ ಮಾಡಿಸಿ ತಂದಿದ್ದು ಕ್ಷೇತ್ರದ ಕುಟುಂಬದ ಮಗನಾಗಿ ನನ್ನ ಬದ್ದತೆಯ ಕಾರ್ಯ ಮಾಡಿದ್ದೇನೆ. ಮುಂದೆಯು ನಿಮ್ಮ ಆಶಿರ್ವಾದದಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರಿಗು ಹಾಗು ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ನವರಿಗು ಕೃತಜ್ಞತೆ ಸಲ್ಲಿಸುವೆ ಎಂದು ಮಂಜೂರಾತಿ ಪತ್ರ ವಿತರಿಸಿದ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದರು.


     ವೇದಿಕೆಯಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ವಿಜಯ್ ಮಿರಾಶಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
    ಈ ಸಂದರ್ಭದಲ್ಲಿ ಈ ಭಾಗದ ಪ್ರಮುಖ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ವಿಜಯ್ ಮಿರಾಶಿ, ರಾಘುಗೊಂದಿ ಪಂಚಾಯತ ಅಭಿವೃದ್ಧಿ ಅಧಿಕಾರಿ, ಜನಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.


     ನಂತರ ಇದೇ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಲ್ಕೇರಿ ಗ್ರಾಮದ 1 ಕೋಟಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು..


      ಭಾವೈಕ್ಯತೆಗೆ ಹೆಸರಾದ ಗ್ರಾಮ ಅಲ್ಕೇರಿ ಅನ್ಯೋನ್ಯತೆ ಯಿಂದ ಜೀವನ ಸಾಗುಸುತ್ತಿರುವ ಬಡ ಮದ್ಯಮವರ್ಗದವರ  ಬದುಕು ಇತರರಿಗೆ ಮಾದರಿಯಂತೆ ಬದುಕು ನಡೆಸುತ್ತಿದ್ದಾರೆ. ಅವರೆಲ್ಲರ ಜೀವನ ಸಂತಸದ ಪಥದಲ್ಲಿ ಸಾಗಬೇಕಿದೆ. ಇಲ್ಲಿನ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದ್ದು ಗ್ರಾಮಸ್ಥರು ಸಹ ಕೆಲಸದ ಸಮಯದಲ್ಲಿ ಸಹಕರಿಸಬೇಕಿದೆ ಎಂದು ಹೆಬ್ಬಾರ್ ಹೇಳಿದರು.


     ಮದನೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲಗೋಡು ಸಮೀಪ ಸಣ್ಣ ನಿರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಗಳ ಅಡಿಯಲ್ಲಿ 878 ಲಕ್ಷಗಳ ವೆಚ್ಚದಲ್ಲಿ 200 ಕ್ಕು ಅಧಿಕ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರುಣಿಸುವ ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ ಕಾರ್ಯ ನೆರವೇರಿಸಿದರು.


     ಹುಣಶೆಟ್ಟಿಕೊಪ್ಪ ಶಾಲೆಯ ನೂತನ ಕೊಠಡಿಗಳನ್ನು ಶೈಕ್ಷಣಿಕ ಚಟುವಟಿಕೆಗೆ ಲೋಕಾರ್ಪಣೆ ಮಾಡಲಾಯಿತು. ಹಾಗು ವಸತಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಾಯಿತು.


     ಒಟ್ಟಿನಲ್ಲಿ ಶಾಸಕ ಹೆಬ್ಬಾರ್ ಶನಿವಾರ ಕಿರವತ್ತಿ, ಮದನೂರು ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ 17 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು.

ಬಂಜೆತನ ತಜ್ಞರು ಡಾ.ವಿನುತ ಕುಲಕರ್ಣಿ ಅವರೊಂದಿಗೆ ಯಲ್ಲಾಪುರದಲ್ಲಿ ಉಚಿತ ಸಮಾಲೋಚನಾ ಶಿಭಿರ ಇಲ್ಲಿದೆ ಮಾಹಿತಿ

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *