Breaking News

ಯಲ್ಲಾಪುರ ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ವೇಣುಗೋಪಾಲ ಮದ್ಗುಣಿಗೆ ಚಿತ್ರದುರ್ಗದಲ್ಲಿ ಸನ್ಮಾನ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಪ್ರತಿಧ್ವನಿ ಯಲ್ಲಾಪುರ – ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ೧೦೭ನೆಯ ವಾರ್ಷಿಕಾಧಿವೇಶನ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿಯಲ್ಲಿರುವ ಶ್ರೀ ರಾಘವೇಂದ್ರ ಜ್ಞಾನಮಂದಿರದಲ್ಲಿ ನಡೆಯಿತು.

      ಕ.ಸಾ.ಪ ರಾಜ್ಯಾಧ್ಯಕ್ಷ  ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ ೧೦.೩.೨೪ರಂದು ನಡೆದ ವಾರ್ಷಿಕ ಸಭೆಯ ಸಂದರ್ಭದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಮಾರ್ಗದರ್ಶಿ ಸಮಿತಿಯ  ವೇಣುಗೋಪಾಲ ಮದ್ಗುಣಿಯವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೌ.ಕಾರ್ಯದರ್ಶಿಗಳಾದ ನೇ.ಭ.ರಾಮಲಿಂಗ ಶೆಟ್ಟಿ ,ಡಾ.ಪದ್ಮಿನಿ ನಾಗರಾಜ,ಗೌಡ.ಕೋಶಾಧ್ಯಕ್ಷರಾದ ಬಿ.ಎಂ.ಪಟೇಲಪಾಂಡು,ವಿವಿಧ ಜಿಲ್ಲೆಗಳಿಂದ ಆಗಮಿಸಿದ  ಜಿಲ್ಲಾಧ್ಯಕ್ಷರು ಹಾಗು ತಾಲೂಕಾಧ್ಯಕ್ಷರು  ಪದಾಧಿಕಾರಿಗಳು ಉಪಸ್ಥಿತರಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *