Breaking News

ದತ್ತ ಮಂದಿರ ನಿರ್ಮಾಣಕ್ಕೆ ವೇಣುಗೋಪಾಲ ಮದ್ಗುಣಿ ದೇಣಿಗೆ.

ಪ್ರತಿಧ್ವನಿ ಯಲ್ಲಾಪುರ : ಯಲ್ಲಾಪುರದ ನಾಯಕನ ಕೆರೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ದತ್ತಮಂದಿರಕ್ಕೆ ಸ್ಥಳಿಯ ನಿವಾಸಿ ವೇಣುಗೋಪಾಲ ಮದ್ಗುಣಿಯವರು ಒಟ್ಟು 1,22,221/- (ಒಂದು ಲಕ್ಷದ ಇಪ್ಪತ್ತೇರಡು ಸಾವಿರದ ಎರಡನೂರಾಇಪ್ಪತ್ತೋಂದು ರೂಪಾಯಿ ) ದೇಣಿಗೆ ನೀಡಿದ್ದಾರೆ.ಅವರು ತಮ್ಮ ತಂದೆ ಹಾಗೂ ಹಿಂದಿನ ಶೀವಾನಂದ ಸ್ವಾಮಿಯವರ ಸ್ನೇಹದ ದ್ಯೋತಕವಾಗಿ ಈ ಹಣವನ್ನು ನೀಡಿದ್ದಾರೆ. ದತ್ತಮಂದಿರಕ್ಕೆ ಹಿಂದಿನಿಂದಲೂ ಭಕ್ತರಾಗಿರುವ ಇವರು ಮಂದಿರವನ್ನು ರಾಮಚಂದ್ರಾಪುರ ಮಠ ವಹಿಸಿಕೊಂಡ ದಿನದಿಂದಲೂ,ಕಳೆದ ಹದಿನಾರು ವರ್ಷಗಳಿಂದ ದತ್ತ ಜಯಂತಿಗೆ ಸೇವೆ ಸಲ್ಲಿಸುತ್ತಿರುವುದು ಗಮನಾರ್ಹವಾಗಿದೆ. ಮುಂದಿನ ದಿನಗಳಲ್ಲಿಯು ಹೆಚ್ಚಿನ ಸೇವೆ ಸಲ್ಲಿಸುವಂತಾಗಲೆಂದು ದತ್ತಭಕ್ತರು ಆಶಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *