Breaking News

ಸಿಡಿಲ ಬಡಿತಕ್ಕೆ ಸಿಲುಕಿದರು  ಪಾರಾದ ಸೋಮಾಪುರ ಸಹೋದರರು.


ಪ್ರತಿಧ್ವನಿ ಯಲ್ಲಾಪುರ : ತಾಲ್ಲೂಕಿನ ಕಿರವತ್ತಿ ಪಂಚಾಯತ್ ವ್ಯಾಪ್ತಿಯ ಸೋಮಾಪುರದ ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದಿದ್ದು ಸಹೋದರರಿಬ್ಬರು ಸಿಡಿಲ ಹೊಡೆತಕ್ಕೆ ಸಿಲುಕಿದರು ಸಾವಿನ ದವಡೆಯಿಂದ ಪಾರಾಗಿ ಬಂದ ಘಟನೆ ರವಿವಾರ ಸಂಜೆ ನಡೆದಿದೆ.


ಗಣಪತಿ ಕೃಷ್ಣ ಮಿರಾಶಿ ( 32 ) ಮತ್ತು ತಮ್ಮ ಅನಂತನಾಗ್ ಕೃಷ್ಣ ಮಿರಾಶಿ ( 30 ) ಎಂಬ ಸಹೋದರರು ಸೋಮಾಪುರದ ತಮ್ಮ ಹೊಲದಲ್ಲಿ ಕೆಲಸ ಮಾಡುವ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು ಅಣ್ಣ ಗಣಪತಿಗೆ ಪಕ್ಕೆ ಭಾಗದಲ್ಲಿ ಬರೆ ಮೂಡಿದ್ದು ಕಾಲಿನ ಮೇಲಿನ ರೋಮವೆಲ್ಲ ಸುಟ್ಟಿದೆ ತಮ್ಮ ಅನಂತ್ ಕಾಲಿಗೆ ಪೆಟ್ಟಾಗಿದ್ದು ಯಾವುದೆ ಅಹಿತಕರ ಘಟನೆ ಸಂಭವಿಸದಿರುವುದು ಪವಾಡ ಎಂಬಂತಾಗಿದೆ.
ಸದ್ಯ ಯಲ್ಲಾಪುರ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಿದ್ದು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ಸೂಚಿಸಲಾಗಿದೆ.


   ಸಿಡಿಲು ಬಡಿದ ವಿಷಯ ತಿಳಿಯುತ್ತಲೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯ 108 ಆ್ಯಂಬುಲೆನ್ಸ್ ತಕ್ಷಣ ಸ್ಥಳಕ್ಕೆ ಧಾವಿಸಿ ಸಿಡಿಲು ಬಡಿತಕ್ಕೆ ಸಿಲುಕಿದ ಸಹೋದರರನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸಿದ್ದು ಚಾಲಕ ಅನಿಲ್ ನಾಯ್ಕ್ ಹಾಗು ಕಿರವತ್ತಿ ಪಂಚಾಯತ್ ಸದಸ್ಯ ರಹಮತ್ ಅಬ್ಬಿಗೆರೆ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *