Breaking News

ಗಾಳಿ ಮಳೆಗೆ ವೈಟಿಎಸ್ಎಸ್ ಶಾಲಾ ಕೊಠಡಿ ಮೇಲೆ ಬಿದ್ದ ಮರ ಎರಡು ಕೊಠಡಿಗೆ ಹಾನಿ ರಜೆ ಕಾರಣ ಪಾರಾದ ಮಕ್ಕಳು.!!

ಯಲ್ಲಾಪುರ : ಸುಡು ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಭುವಿಗೆ ಮೇ 15 ರಂದು ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆ ತಂಪನ್ನುಂಟು ಮಾಡಿದ್ದಲ್ಲದೇ ಅವಘಡಗಳನ್ನೂ ಸೃಷ್ಠಿಸಿದೆ.


ಪಟ್ಟಣದ ಪ್ರತಿಷ್ಠಿತ ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲಾ ಕಟ್ಟಡದ ಮೇಲೆ ದೊಡ್ಡ ಗಾತ್ರದ ಕಾಡುಜಾತಿ ಮರ ಬಿದ್ದು ಎರಡು ಕೊಠಡಿಗಳಿಗೆ ಬಾರೀ ಪ್ರಮಾಣದಲ್ಲಿ ಹಾನಿಯಾಗಿದೆ.

ಕಟ್ಟಡದ ಹಿಂಬದಿಯ ಶೌಚಾಲಯಕ್ಕೂ ಹಾನಿಯಾಗಿದೆ.


ಮರ ಬಿದ್ದ ರಭಸಕ್ಕೆ ಕಟ್ಟಡದ ದೊಡ್ಡ ದೊಡ್ಡ ಮರದ ತೊಲೆಗಳು ತುಂಡಾಗಿ ಕೊಠಡಿಯೊಳಗೆ ವಿದ್ಯಾರ್ಥಿಗಳು ಕುಳಿತುಕೊಳ್ಳುವ ಡೆಸ್ಕ್ ಮೇಲೆ ಬಿದ್ದಿದೆ. ಶಾಲೆಗಳಿನ್ನೂ ಪ್ರಾರಂಭವಾಗದ ಕಾರಣ ವಿದ್ಯಾರ್ಥಿಗಳಾರೂ ಕೊಠಡಿಯೊಳಗೆ ಇರದಿರುವುದು ಅದೃಷ್ಟವೆಂದೇ ಹೇಳಬಹುದಾಗಿದೆ.


ವಿಷಯ ತಿಳಿದ ಆಡಳಿತ ಮಂಡಳಿ ಪ್ರಮುಖರು, ಕಂದಾಯ ಇಲಾಖೆ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಬಿಸಿಲಿನ ಝಳಕ್ಕೆ ತಂಪೆರೆವ ಸ್ವರ್ಗ  ಯಲ್ಲಾಪುರದ “ಸಾತೊಡ್ಡಿ ಜಲಪಾತ” ಪ್ರವಾಸಿಗರ ಕೈ ಬೀಸಿ ಕರೆಯುತ್ತಿದೆ.

ಕೇಬಲ್ ನಾಗೇಶ್, ಯಲ್ಲಾಪುರ..🖋 ಪ್ರತಿಧ್ವನಿ ಯಲ್ಲಾಪುರ : ಒಂದೆಡೆ ಸಾಗರ ಮತ್ತೊಂದೆಡೆ ಜಲಪಾತಗಳ ಆಗರ  ಹಚ್ಚಹಸಿರಿನ ಮಡಿಲು ಉತ್ತರ ಕನ್ನಡ …

Leave a Reply

Your email address will not be published. Required fields are marked *