Breaking News

ದ್ವಿತೀಯ ಪಿಯುಸಿ ಪರೀಕ್ಷೆ-2  ಬರೆದು ಅಂಕ ಹೆಚ್ಚಿಸಿಕೊಂಡ ನಯನಾ ಭಟ್ಟ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಪ್ರತಿಷ್ಠಿತ ವೈ.ಟಿ.ಎಸ್.ಎಸ್ ಸಂಸ್ಥೆಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಯನಾ ಭಟ್ಟ ದ್ವಿತೀಯ ಪಿಯುಸಿ ಪರೀಕ್ಷೆ- 2ರಲ್ಲಿ ಮೊದಲ ಪರೀಕ್ಷೆಗಿಂತ 5 ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾಳೆ

ಕು|| ನಯನಾ ಭಟ್


ಮೊದಲ ಪರೀಕ್ಷೆಯಲ್ಲಿ 586 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಬಂದಿದ್ದ ವಿದ್ಯಾರ್ಥಿನಿ ತನ್ನ ಫಲಿತಾಂಶ ಇನ್ನಷ್ಟು ಉತ್ತಮಪಡಿಸಿಕೊಳ್ಳುವ ಸಲುವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ ಎರಡು ವಿಷಯಗಳನ್ನು ಬರೆದಿದ್ದು 5 ಅಂಕ ಹೆಚ್ಚಾಗಿ 591 ಅಂಕಗಳನ್ನು ಪಡೆಯುವುದರೊಂದಿಗೆ ತಾಲೂಕಿಗೆ ಪ್ರಥಮ, ಜಿಲ್ಲೆಗೆ 5 ಹಾಗೂ ರಾಜ್ಯಕ್ಕೆ 8 ನೇ ಸ್ಥಾನ ಪಡೆದಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಯನ್ನು ಮೆಚ್ಚಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿ ಮಂಡಳಿಯ ಎಲ್ಲ ಸದಸ್ಯರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗ ಅಭಿನಂದಿಸಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

“ಭಾವಗಳ ಬ್ರಹ್ಮಾಂಡ” ಕವನ ಸಂಕಲನ ಮೇ 1 ಕ್ಕೆ ಅನಾವರಣ..

ಪ್ರತಿಧ್ವನಿ ಯಲ್ಲಾಪುರ : ತಾಲೂಕಿನಲ್ಲಿ ಇದೇ ಮೊದಲು AI ತಂತ್ರಜ್ಞಾನ ಬಳಸಿ ಒಂದು ಸುಂದರ ಕವನ ಸಂಕಲನ ರೂಪುಗೊಂಡಿದ್ದು “ಭಾವಗಳ …

Leave a Reply

Your email address will not be published. Required fields are marked *