Breaking News

ಶುಕ್ರವಾರ ಸುರಿದ ಮಳೆಗೆ ತೊಟ್ಟಿಯಂತಾದ ಯಲ್ಲಾಪುರ ನೂತನ ನಗರ ಉರ್ದುಶಾಲೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ – ಪಟ್ಟಣದಲ್ಲಿ ಶುಕ್ರವಾರ ಸುರಿದ ಮಳೆಗೆ ನೂತನ ನಗರದಲ್ಲಿರುವ ಉರ್ದು ಪ್ರಾಥಮಿಕ ಶಾಲೆ ಕೊಠಡಿ ತುಂಬಾ ನೀರು ತುಂಬಿ ನೀರಿನ ತೊಟ್ಟಿಯಾಗಿದೆ.


ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತಹಶಿಲ್ದಾರ ಅಶೋಕ್ ಭಟ್ ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗೆ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದ್ದಾರೆ.


ಪುಟ್ಟ ಮಕ್ಕಳು ತಂಡಿಯಾದ ನೆಲದ ಮೇಲೆ ಪಾಠ ಕೇಳುವ ಪ್ರಮೇಯ ಒದಗಿ ಬಂದಿದ್ದು ಶಿಕ್ಷಕಿ ಕೂಡ ನೀರಿನಲ್ಲಿ ನಿಂತು ಪಾಠ ಮಾಡುವ ದುರ್ಗತಿ ಬಂದೊದಗಿದೆ.

ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ಮಾರ್ಗ ಕಂಡು ಕೊಳ್ಳಬೇಕಿದೆ ಎಂಬುದು ಸ್ಥಳೀಯ ಪ್ರಮುಖ ಶಫಿ ಎಮ್ ಶೇಖ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಸ್ಥಳಕ್ಕೆ ಭೇಟಿ ನೀಡಿದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುನಿಲ್ ಸುಭಾಶ್ ಗಾವಡೆ ನೀರಿನಲ್ಲೆ ಕುಳಿತು ಪಾಠ ಕೇಳುವ ಮಕ್ಕಳ ಸ್ಥಿತಿ ಕಂಡು ತಾತ್ಕಾಲಿಕವಾಗಿ ಶಾಲೆಗೆ ಟಾರ್ಪಾಲ್ ವ್ಯವಸ್ಥೆ ಮಾಡಲಿದ್ದು ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ ಇಂಜಿನಿಯರ್ ವಿಭಾಗದವರಿಗು ಮಾಹಿತಿ ನೀಡಲಿದ್ದೇನೆ ಎಂದು  ಪ್ರತಿಕ್ರಿಯೆ ನೀಡಿದ್ದಾರೆ.


ಪ್ರಸಕ್ತ ಸಾಲಿನಲ್ಲಿ ಶಾಲೆಯ ಮೇಲ್ಚಾವಣಿ ನಿರ್ಮಿಸುವುದು ಅಥವ ದುರಸ್ತಿ ಕಾರ್ಯ ನಡೆಸಲೇಬೇಕಿರುವ ಕಟ್ಟಡಗಳ ಪಟ್ಟಿಯಲ್ಲಿ ನೂತನ ನಗರದ ಉರ್ದುಶಾಲೆ ಹೆಸರನ್ನು ಸೇರಿಸಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ  ಪ್ರತಿಕ್ರಿಯಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *