Breaking News

ಮದರ್ ಥೆರೆಸಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ “ಸ್ಕೂಲ್ ಎಕ್ಸ್ ಪೋ” ಯಶಸ್ವಿ ಪ್ರದರ್ಶನ..

ಒಫ

ಯಲ್ಲಾಪುರದ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ


ಪ್ರತಿಧ್ವನಿ ಯಲ್ಲಾಪುರ : ಪಟ್ಟಣದ ಮದರ್ ಥೆರೆಸಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಕ್ಕಳ ಬುದ್ದಿಮತ್ತೆ ಮತ್ತು ಕೈಚಳಕದಲ್ಲಿ ವಿವಿಧ ವಿನ್ಯಾಸದ ವಸ್ತು ಪ್ರದರ್ಶನ “ಸ್ಕೂಲ್ ಎಕ್ಸ್ ಪೋ” ಏರ್ಪಡಿಸಲಾಗಿತ್ತು.

ಶಾಲೆಯ ಮುಖ್ಯೋಪಾಧ್ಯಾಯ ಫಾ. ರಾಯ್ ಸ್ಟನ್ ಗೊನ್ಸಾಲ್ವಿಸ್ ನೇತೃತ್ವದಲ್ಲಿ ಕೆಡಿಇಎಸ್ ಸೆಕ್ರೆಟರಿ ಡಾ. ವಲೇರಿಯನ್ ಸೆಕ್ವೇರಿಯಾ ಮತ್ತು ಶಾಲಾ ಮೇಲ್ವಿಚಾರಕರಾದ ಫಾ.ಪೀಟರ್ ರ‍್ನೆರಿಯೋ ಉಪಸ್ಥಿತಿಯಲ್ಲಿ ವಸ್ತುಪ್ರದರ್ಶನ ಯಶಸ್ವಿಯಾಗಿ ನಡೆಯಿತು.

ಮದರ್ ಥೆರೆಸ ಸ್ಕೂಲ್ ಎಕ್ಸ್ ಪೋ ವೀಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


ವಿದ್ಯಾರ್ಥಿಗಳು ತಮ್ಮ ಬುದ್ದಿಮತ್ತೆ ಬಳಸಿ ತಯಾರಿಸಿದ ವೈಜ್ಞಾನಿಕ , ವಾಸ್ತುಶಿಲ್ಪ, ಸುಂದರ ವಿನ್ಯಾಸದ ಮತ್ತು ಅಂತರಿಕ್ಷಕ್ಕೆ ಸಂಬಂಧಿಸಿದ ಮಾದರಿಗಳು ಹೆಚ್ಚಾಗಿ ಕಂಡು ಬಂದವು.

ಪ್ರಸ್ತುತ ದಿನಮಾನಗಳಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಕೊರತೆ ಕಂಡು ಬರುತ್ತಿದ್ದು ಶುದ್ಧ ಕುಡಿಯುವ ನೀರನ್ನು ಪಡೆಯುವ ವಿಧಾನ ನೋಡುಗರ ಗಮನ ಸೆಳೆಯಿತು.

ಡೈನೋಸಾರಸ್, ರೋಬೋ ಇನ್ನಿತರ ಮಾದರಿಗಳು ವಸ್ತುಪ್ರದರ್ಶನದ ಕೇಂದ್ರ ಬಿಂದುಗಳಾಗಿದ್ದವು. ವಿದ್ಯಾರ್ಥಿಗಳು ತಯಾರಿಸಿದ ಮಾದರಿಯನ್ನು ವೀಕ್ಷಿಸಲು ಪೋಷಕರ ದಂಡೇ ಹರಿದು ಬಂದಿತ್ತು. ಪ್ರತಿ ವಿನ್ಯಾಸವನ್ನೂ ವಿವರಿಸುವ ವಿದ್ಯಾರ್ಥಿಗಳಲ್ಲಿ ತಮ್ಮ ತಯಾರಿಕೆಯ ಹೆಮ್ಮೆ ಇತ್ತು. ಶಾಲಾ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ವಸ್ತುಪ್ರದರ್ಶನದಲ್ಲಿ ತೊಡಗಿಸಿಕೊಂಡಿದ್ದರು.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *