Breaking News

ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ARM’ ಸಿನಿಮಾ

ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ.
ಬಿಡುಗಡೆಯಾದ ಎರಡು ದಿನಕ್ಕೆ 54 ಕೋಟಿ ಕಲೆಕ್ಷನ್ ಆಗಿದೆ. ನೂರು ಕೋಟಿ ಕಲೆಕ್ಷನ್ ನತ್ತ ಮುನ್ನುಗುತ್ತದೆ ಚಿತ್ರತಂಡ ಹೇಳಿದೆ.

ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಸಂಸ್ಥೆ ಬಿಡುಗಡೆ ಮಾಡಿದೆ . ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ.

ನಟ ಟೊವಿನೋ ಥಾಮಸ್‌ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮೋಡಿ ಮಾಡಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ಎಆರ್‌ಎಂ ಸಿನಿಮಾದಲ್ಲಿದ್ದಾರೆ.

ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ. ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಎಆರ್ಎಂ ಭರ್ಜರಿ ಆ್ಯಕ್ಷನ್ ಸೀನ್ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ಚಿತ್ರದಲ್ಲಿಇದೆ.

ಉತ್ತರ ಕೇರಳದ ವಿವಿಧ ಸಮಯಾವಧಿಯಲ್ಲಿನ (1900, 1950 ಮತ್ತು 1990) ನಿರೂಪಣೆಗಳನ್ನು ಒಳಗೊಂಡಿದೆ. ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ಯಲ್ಲಾಪುರದ ಪಂಚಾಯತ ರಾಜ್ ಇಂಜಿನೀಯರಿಂಗ್ ಕಛೇರಿಯಲ್ಲಿ ಗಣೇಶೋತ್ಸವ – ಶ್ರೀಧರ ಸಂಜೀವ ಕರಕೆರ ಕೈಯಲ್ಲಿ ಅರಳಿದ ಕೂರ್ಮಾರೂಡ ಗಣಪ.

ಪ್ರತಿಧ್ವನಿ ಯಲ್ಲಾಪುರ : ಪಟ್ಟಣದಲ್ಲಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ, ಪಂಚಾಯತ ರಾಜ್ ಇಂಜಿನೀಯರಿಂಗ್, ಉಪ ವಿಭಾಗ, ಯಲ್ಲಾಪುರ ಕಾರ್ಯಾಲಯದಲ್ಲಿ ಅಧಿಕಾರಿ …

Leave a Reply

Your email address will not be published. Required fields are marked *