Breaking News

ಯಲ್ಲಾಪುರ ಶಿಕ್ಷಕರ ಪುತ್ರ ಮೂಡಬಿದರೆ ಕಾಲೇಜಿನ ವಿದ್ಯಾರ್ಥಿ ನಿರೀಕ್ಷಿತ್ ನಾಯ್ಕ್ ಚಕ್ರ ಎಸೆತದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ಶಿವಮೊಗ್ಗದಲ್ಲಿ ನಡೆದ ೨೬ನೇ ರಾಜ್ಯಮಟ್ಟದ ಅಂತರ್ ಕಾಲೇಜು ಅಥ್ಲೆಟಿಕ್ಸ್ 2024- 25ನೇ ಸಾಲಿನ ಕ್ರೀಡಾಕೂಟದಲ್ಲಿ, ಯಲ್ಲಾಪುರ ಮೂಲದ ಹಾಲಿ ಮೂಡಬಿದರೆ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಒಂದನೇ ವರ್ಷದ ವಿದ್ಯಾರ್ಥಿ ನಿರೀಕ್ಷಿತ ಸಂತೋಷ್ ನಾಯಕ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿ ಹೆತ್ತವರಿಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾನೆ.


ಈತ ಮೂಲತಃ ಯಲ್ಲಾಪುರದ ನಿವಾಸಿಯಾಗಿದ್ದು, ಶಿಕ್ಷಕ ದಂಪತಿಗಳಾದ ವೀಣಾ ಮತ್ತು ಸಂತೋಷ್ ನಾಯಕ್‌ರವರ ಪುತ್ರನಾಗಿರುತ್ತಾನೆ. ಇವನು ಯಲ್ಲಾಪುರದ ವೈ.ಟಿ.ಎಸ್.ಎಸ್ ಹಾಗೂ ವಿಶ್ವದರ್ಶನ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದು, 2023 -24 ನೇ ಸಾಲಿನಲ್ಲಿ ಕೂಡ ಚಕ್ರ ಎಸೆತದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುತ್ತಾನೆ.

ಇವನ ಸಾಧನೆಗೆ ಸಹೋದರಿಯರು ತಂದೆ ತಾಯಿಯರು, ಗುರು ಹಿರಿಯರು, ಸ್ನೇಹಿತರು ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

2025 ನೆ ಸಾಲಿನ ಯಲ್ಲಾಪುರ ಗಣಪತಿಗಳ ದಿವ್ಯ ದರ್ಶನ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಯಲ್ಲಾಪುರ : ಪಟ್ಟಣದಲ್ಲಿ 20 ಕ್ಕು ಅಧಿಕ ಕಡೆಗಳಲ್ಲಿ …

Leave a Reply

Your email address will not be published. Required fields are marked *