Breaking News

ಮಂಜು ಮುಸುಕಿದ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಪಾಯದಲ್ಲಿ

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ

ಯಲ್ಲಾಪುರ : ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮುಂಜಾನೆ ವಿಪರೀತ ಮಂಜು ಸುರಿಯುತ್ತಿದ್ದು ೮ಘಂಟೆಯವರೆಗೂ ರಸ್ತೆ ಕಾಣದಿರುವಷ್ಟು ಇಬ್ಬನಿ ತುಂಬಿಕೊಂಡಿರುತ್ತದೆ. ಈ ವೇಳೆ ವಾಹನ ಸಂಚಾರ ಅತ್ಯಂತ ಕಷ್ಟಕರವಾಗಿದ್ದು ಅಪಾಯಕಾರಿಯೂ ಆಗಿರುತ್ತದೆ.


ಮುಂಜಾನೆಯಲ್ಲಿ ಇಬ್ಬನಿ ತುಂಬಿದ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದ್ದು ಅಪಘಾತಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ. ಸದ್ಯ ಕಳೆದೆರಡು ದಿನಗಳಿಂದ ವಿಪರೀತ ಮಂಜು ಸುರಿಯುತ್ತಿರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆಯಿಂದ ಸ್ವಲ್ಪ ಸಮಯ ಮಂಜಿನ ವಾತಾವರಣ ತಿಳಿಯಾಗಿ ಹೆದ್ದಾರಿ ಸ್ಪಷ್ಟವಾಗಿ ಗೋಚರಿಸಿದ ನಂತರ ಪ್ರಯಾಣಿಸುವುದು ಸೂಕ್ತ ಎಂಬುದು ಹಿರಿಯ ವಾಹನ ಚಾಲಕರ ಅಭಿಪ್ರಾಯವಾಗಿದೆ.

ವಿಶೇಷವಾಗಿ ಮುಂಜಾನೆ ವೇಳೆ ವಾಯು ವಿಹಾರಕ್ಕೆಂದು ತೆರಳುವ ಹಿರಿಯ ನಾಗರೀಕರು, ಮಹಿಳೆಯರು, ಪುಟ್ಟ ಮಕ್ಕಳು ಹೆದ್ದಾರಿಯಲ್ಲಿ ಸಂಚರಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕಿದೆ. ಹಾಗೂ ಯುವಕ-ಯುವತಿಯರು ಇಯರ್‌ಫೋನ್ ಕಿವಿಗೆ ಹಾಕಿಕೊಂಡು ಹಾಡು ಕೇಳುತ್ತಾ ಸಂಚರಿಸುವುದೂ ಸಹ ಅಪಾಯಕಾರಿಯಾಗಿದೆ.

ಹೆದ್ದಾರಿಯಲ್ಲಿ ಬರುವ ವಾಹನಕ್ಕೆ ಮುಂಬದಿಯಿದ ಬರುವ ವಾಹನವಾಗಲೀ, ಪಾದಚಾರಿಗಳಾಗಲೀ ಗೋಚರಿಸದೇ ಅಪಘಾತವಾಗುವ ಸಂಭವ ಹೆಚ್ಚಿದ್ದು ಜಾಗೃತಿ ವಹಿಸಬೇಕಿದೆ.

About Shyamala Nagesh

ನಾಡಿನ ಎಲ್ಲಾ ಕನ್ನಡ ಹೃದಯಗಳಿಗೆ ನನ್ನ ನಮನಗಳು. ನಾನು ನಿಮ್ಮ ಶ್ಯಾಮಲಾ ನಾಗೇಶ್ ಪ್ರತಿಧ್ವನಿ ಯಲ್ಲಾಪುರ ವೆಬ್ ನ್ಯೂಸ್ ನ ಪ್ರಧಾನ ಸಂಪಾದಕಿ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ. ಡಿಪ್ಲೊಮ ವರೆಗೆ ವಿಧ್ಯಾಭ್ಯಾಸ. ನಾಗೇಶ್ ಕುಮಾರ್ ನನ್ನ ಪತಿಯಾಗಿದ್ದು ಅವರು ಸಹ ಪತ್ರಕರ್ತರು. ನನಗೆ ಒಂದು ಗಂಡು ಒಂದು ಹೆಣ್ಣು ಎರಡು ಮಕ್ಕಳು. ಯಲ್ಲಾಪುರದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ ಕಂಪ್ಯೂಟರ್ ಆಪರೇಟರ್ ಆಗಿ ವೃತ್ತಿ ಸಾಗಿಸುತ್ತಿದ್ದು ಬಿಡುವಿನ ವೇಳೆಯಲ್ಲಿ ಪತಿಯ ಪತ್ರಕರ್ತ ವೃತ್ತಿಗೆ ಸಹಕರಿಸುತ್ತಿದ್ದು ಅದರ ಪ್ರೇರಣೆಯಿಂದ ನನ್ನದೆ ಒಂದು ವೆಬ್ ನ್ಯೂಸ್ ಪ್ರಾರಂಭಿಸಿದ್ದೇನೆ. ಮಹಿಳೆ ಸಮಾಜದಲ್ಲಿ ಎಲ್ಲಾ ರಂಗಗಳಲ್ಲಿ ತನ್ನ ಚಟುವಟಿಕೆಗಳನ್ನು ದೃಡೀಕರಿಸುತ್ತಿರುವ ದಿನಮಾನಗಳಲ್ಲಿ ನಾನೇಕೆ ಈ ಕ್ಷೇತ್ರದಲ್ಲಿ ಕೃಷಿ ಮಾಡಬಾರದು ನಿಮ್ಮೆಲ್ಲರ ನಿಷ್ಕಲ್ಮಶ ಆಶಿರ್ವಾದ ಹಾರೈಕೆ ಇರುವಾಗ ನನ್ನ ಪ್ರಯತ್ನ ಸಾರ್ಥಕ ಖಂಡಿತ ಸದಾ ಹೀಗೆ ಹರಸಿರಿ.

Check Also

ವೈ.ಟಿ.ಎಸ್‌.ಎಸ್ ನಿಂದ ರಾಧಾ ಕೃಷ್ಣ ವೇಷ ಸ್ಪರ್ಧೆ.

ಯಲ್ಲಾಪುರ ಗ್ರಾಮದೇವಿ ಅನುಗ್ರಹದಲ್ಲಿ ಶ್ಯಾಮಲಾ ನಾಗೇಶ್ ಲೇಖನಿಯಲ್ಲಿ ಪ್ರತಿಧ್ವನಿ ಯಲ್ಲಾಪುರ ಪ್ರತಿಧ್ವನಿ ಯಲ್ಲಾಪುರ ವರದಿ, ಯಲ್ಲಾಪುರ : ಸ್ಥಳೀಯ ವೈ.ಟಿ.ಎಸ್.ಎಸ್ …

Leave a Reply

Your email address will not be published. Required fields are marked *